Advertisement

ರೈತರ ಅಭಿವೃದ್ಧಿಗೆ ರೇಷ್ಮೆ  ಕೃಷಿ ವರದಾನ: ಸಿಇಒ ಮಾನಕರ

09:40 AM Mar 03, 2019 | Team Udayavani |

ಬಾಗಲಕೋಟೆ: ಜಿಲ್ಲೆಯಲ್ಲಿ ಸತತವಾಗಿ ಬರಗಾಲ ಆವರಿಸಿದ್ದು, ಜಿಲ್ಲೆಯ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ರೇಷ್ಮೆ ಕೃಷಿ ಅಭಿವೃದ್ಧಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ಹೇಳಿದರು. ನವನಗರದ ಜಿ.ಪಂ ಸಭಾ ಭವನದಲ್ಲಿ ಜರುಗಿದ ರೇಷ್ಮೆ ಕೃಷಿಕರ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Advertisement

ರೇಷ್ಮೆ ಬೆಳೆಗಾರರ ಅಭಿವೃದ್ಧಿಗೆ ನರೇಗಾ ಯೋಜನೆಯಡಿ ವಿವಿಧ ಕಾರ್ಯಕ್ರಮ ರೂಪಿಸಲಾಗಿದ್ದು, ಇದರ ಸೌಲಭ್ಯ ನೀಡುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಿಂದ ಯುವ ನಿರುದ್ಯೋಗಿಗಳಿಗೆ ಮತ್ತು ರೈತರ ಆರ್ಥಿಕ ಅಭಿವೃದ್ಧಿಗೆ ರೇಷ್ಮೆ ಕೃಷಿ ವರದಾನವಾಗಲಿದೆ. ರೇಷ್ಮೆ ಕೃಷಿಯಿಂದ ಕಡಿಮೆ ಬಂಡವಾಳದಲ್ಲಿ ಹೆಚ್ಚಿನ ಆದಾಯ ಪಡೆಯಬಹುದಾಗಿದ್ದು, ನಿರಂತರ ಆದಾಯ ಪಡೆಯಬಹುದಾಗಿದೆ ಎಂದು ತಿಳಿಸಿದರು. 

ರೇಷ್ಮೆ ಕೃಷಿ ಮಾಡುವವರಿಗೆ ನರೇಗಾ ಯೋಜನೆಯಿಂದ ಸಿಗುವ ಸಹಾಯ ಧನ ಬಳಸಿಕೊಂಡು ರೇಷ್ಮೆ ಕೃಷಿ ಅಭಿವೃದ್ದಿ ಪಡಿಸಿ ಉತ್ತಮ ಬೆಳೆ ಬೆಳೆದು ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಸರಕಾರ ಈ ಯೋಜನೆಯಿಂದ ರೈತರಿಗೆ ವರದಾನವಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ಸಿಇಒ ಗಂಗೂಬಾಯಿ ಮಾನಕರ ತಿಳಿಸಿದರು.

ಜಿಲ್ಲೆಯಲ್ಲಿ ಸತತ ಬರಗಾಲದಿಂದ ರೈತ ತತ್ತರಿಸುತ್ತಿದ್ದು, ನರೇಗಾ ಯೋಜನೆಯಡಿ ನಿಗದಿತ ಗುರಿಗಿಂತ ಹೆಚ್ಚಿಗೆ ನೀಡಿದ್ದು, ರೈತರಿಗೆ ಮಾಹಿತಿ ನೀಡಿ ಪ್ರೇರೇಪಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ಮಾಡಲು ತಿರ್ಮಾನಿಸಲಾಗಿದ್ದು, ಇದರಿಂದ ವಿವಿಧ ಯೋಜನೆಗಳ ಸೌಲಭ್ಯಗಳಿಂದ ಅಭಿವೃದ್ಧಿಯಾಗುತ್ತಿರುವ ಬಗ್ಗೆ ತಿಳಿಯಬಹುದಾಗಿದೆ ಎಂದು ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಇವಿಎಂ ಹಾಗೂ ವಿವಿಪ್ಯಾಟ್‌ ಯಂತ್ರಗಳ ಬಗ್ಗೆ ಅರಿವು ಮೂಡಿಸುವದರ ಜೊತೆಗೆ ಮತದಾನ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಇದಕ್ಕಾಗಿ ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು ಇದ್ದ ಬಗ್ಗೆ ಖಚಿತಪಡಿಸಿಕೊಳ್ಳುವುದು ಅವಶ್ಯವಾಗಿದೆ. ಅಲ್ಲದೇ ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ವರ್ಗಾವಣೆಗೆ ಹಾಗೂ ಹೊಸದಾಗಿ ಹೆಸರು ಸೇರ್ಪಡೆಗೆ ಭಾರತ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳುವ ಮೂಲಕ ಪ್ರತಿಯೊಬ್ಬರು ನೀಡಿರುವ ಮತದಾನದ ಹಕ್ಕನ್ನು ಚಲಾಯಿಸಬೇಕು ಮಾನಕರ ಹೇಳಿದರು. ರೇಷ್ಮೆ ವಲಯಾಧಿಕಾರಿ ಆರ್‌.ಎಸ್‌.ಜೋಗೂರ, ಸಿ.ಜಿ. ಪಾಟೀಲ, ರೇಷ್ಮೆ ವಿಸ್ತರಣಾಧಿಕಾರಿ ಬಿ.ಬಿ. ನಡುವಿನಮನಿ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next