Advertisement

Simhapriya: ಮೊದಲ ಮಗುವಿನ ನಿರೀಕ್ಷೆಯಲ್ಲಿ ವಸಿಷ್ಠ- ಹರಿಪ್ರಿಯಾ

12:45 PM Nov 02, 2024 | Team Udayavani |

ಸ್ಯಾಂಡಲ್‌ವುಡ್‌ ನ ಸೆಲೆಬ್ರೆಟಿ ದಂಪತಿ ನಟ ವಸಿಷ್ಠ ಹಾಗೂ ನಟಿ ಹರಿಪ್ರಿಯಾ ದಂಪತಿ ದೀಪಾವಳಿ ಸಂದರ್ಭದಲ್ಲಿ ಶುಭ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ.

Advertisement

ಕಳೆದ ವರ್ಷ ಮದುವೆಯಾಗಿದ್ದ ಈ ದಂಪತಿ, ಸದ್ಯ ತಮ್ಮ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

“ಪ್ರೀತಿಯ ಹಿತೈಶಿಗಳಿಗೆ, ಕರ್ನಾಟಕ ರಾಜ್ಯೋತ್ಸವದ ಹಾಗೂ ದೀಪಾವಳಿಯ ಶುಭಾಶಯಗಳು. ಈ ಶುಭ ದಿನದಂದು, ನಿಮ್ಮೆಲ್ಲರೊಡನೆ ಶುಭ ಸುದ್ದಿಯೊಂದನ್ನು ಹಂಚಿಕೊಳ್ಳುವಾಸೆ ನಮ್ಮದು. ನಿಮ್ಮಲ್ಲಿ ಬಹುತೇಕರು ಊಹಿಸಿದ್ದು ಸರಿಯೇ. ಹೌದು, ನಾವು ನಮ್ಮ ಕುಡಿಗಾಗಿ ಎದುರು ನೋಡುತ್ತಿದ್ದೇವೆ. ನಿಮ್ಮೆಲ್ಲರ ಹಾರೈಕೆ- ಆಶೀರ್ವಾದಗಳ ನಿರೀಕ್ಷೆಯಲ್ಲಿ’ ಎಂದು ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸುದ್ದಿ ತಿಳಿದ ಅವರ ಅಭಿಮಾನಿಗಳು ಶುಭಾಶಯ ಸಂದೇಶ ಕಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next