Advertisement

ಸೆ.2ಕ್ಕೆ ಸರಳವಾಗಿ ಕೆಂಪೇಗೌಡ ಜಯಂತಿ ಆಚರಣೆ

02:24 PM Aug 28, 2020 | Suhan S |

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಸೆ.2ರಂದು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮೇಯರ್‌ ಎಂ.ಗೌತಮ್‌ಕುಮಾರ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿ, ಕೋವಿಡ್ ಸೋಂಕು ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಗುವುದು. ಪಾಲಿಕೆ ಆಡಳಿತ ಪಕ್ಷದ ನಾಯಕರು, ವಿರೋಧ ಪಕ್ಷದ ನಾಯಕರು, ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ಅವರು ಸೇರಿ ಸಭೆ ನಡೆಸಿದ್ದೇವೆಂದರು.

Advertisement

ಸೆ.2ಕ್ಕೆ ಪಾಲಿಕೆ ವ್ಯಾಪ್ತಿಯ 8 ವಲಯದ ಪಾಲಿಕೆ ಸದಸ್ಯರು, ಶಾಸಕರು, ಸಂಸದರು, ಬಿಬಿಎಂಪಿ ಅಧಿಕಾರಿಗಳು ವಲಯದ ಹಂತದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲಾಗುತ್ತದೆ. ಇನ್ನು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೆ.2ಕ್ಕೆ ಸರಳವಾಗಿ ಆಚರಣೆ ಮಾಡಲಿದ್ದೇವೆ. ಈ ವೇಳೆ ಕೋವಿಡೆ್ ವಾರಿಯರ್ಸ್‌ ಹಾಗೂ ಅವರ ಕುಟುಂಬದವರನ್ನು ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು. ಮತ್ತೂಮ್ಮೆ ಸಭೆ: “ಉದಯವಾಣಿ’ಯೊಂದಿಗೆ ಮಾತನಾಡಿದ ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್‌, ಆಯ್ದ 20 ವಾರಿಯರ್ಸ್‌ಗೆ ಕೆಂಪೇಗೌಡ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಪಾಲಿಕೆ ಕೇಂದ್ರ ಕಚೇರಿಯ ಗಾಜಿನ ಮನೆ ಸಭಾಂಗಣದಲ್ಲಿ ಗರಿಷ್ಠ 100 ಜನ ಸೇರುವಂತೆ ಸರಳವಾಗಿ ಕಾರ್ಯಕ್ರಮ ನಡೆಸಲಿದ್ದೇವೆ. ವಾಡಿಕೆಯಂತೆ ಪುರುಷರಿಗೆ ಕೆಂಪೇಗೌಡ ಪ್ರಶಸ್ತಿ, ಮಹಿಳೆಯರಿಗೆ ಲಕ್ಷ್ಮೀ ದೇವಿ ಪ್ರಶಸ್ತಿ ನೀಡಲಾಗುತ್ತಿತ್ತು. 50 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ನೀಡಲಾಗುತ್ತಿತ್ತು. ಈ ಬಾರಿ ಈ ವಿಚಾರ ಇನ್ನೂ ಅಂತಿಮವಾಗಿಲ್ಲ. ಮತ್ತೂಂದು ಸುತ್ತಿನ ಸಭೆ ನಡೆಯಲಿದ್ದು ಅಂತಿಮ ರೂಪುರೇಷೆ ಸಿಗಲಿದೆ ಎಂದು ಮಾಹಿತಿ ನೀಡಿದರು.

ಗೋಪುರದಲ್ಲಿ ಜ್ಯೋತಿ ಬೆಳಗಿಸುವಿಕೆ: ಕೆಂಪೇಗೌಡ ಅವರು ಬೆಂಗಳೂರಿನ 4 ಮೂಲೆಯಲ್ಲಿ ನಿರ್ಮಿಸಿರುವ ಗಡಿ ಗೋಪುರಗಳಲ್ಲಿ ಜ್ಯೋತಿ ಬೆಳಗಿಸುವ ಸಂಪ್ರದಾಯ ಮುಂದುವರಿಯಲಿದೆ. ಆದರೆ, ಮೆರವಣಿಗೆ ಹಾಗೂ ಸಾಂಪ್ರದಾಯಿಕ ಕಾರ್ಯಕ್ರಮ ಇರುವುದಿಲ್ಲ ಎಂದು ಪಾಲಿಕೆ ಸ್ಪಷ್ಟಪಡಿಸಿದೆ.

ಅವಧಿ ಮುಗಿಯುವುದರ ಒಳಗೆ ಆಚರಿಸಲು ಮನವಿ :  ಪ್ರತಿ ವರ್ಷವೂ ಏಪ್ರಿಲ್‌ನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿತ್ತು. ಆದರೆ, ಈ ಬಾರಿ ಸೋಂಕು ಹೆಚ್ಚಾದ ಹಿನ್ನೆಲೆ ಮುಂದೂಡಲಾಗಿತ್ತು. ಇದೇ ಸೆ.10ಕ್ಕೆ ಮೇಯರ್‌ ಎಂ.ಗೌತಮ್‌ಕುಮಾರ್‌ ಸೇರಿದಂತೆ ಪಾಲಿಕೆ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿದ್ದು, ಇದರ ಒಳಗಾಗಿ ಸರಳವಾಗಿ ಜಯಂತಿ ಆಚರಣೆಗೆ ಪಾಲಿಕೆಯ ಹಲವು ಸದಸ್ಯರು ಒತ್ತಾಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಯಂತಿ ಮಾಡಲು ಪಾಲಿಕೆ ಮುಂದಾಗಿದೆ.

ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಈ ಬಾರಿ ಸರಳವಾಗಿ ಆಚರಣೆ ಮಾಡಲಾಗುತ್ತದೆ. ಸಾಧಕರ ಆಯ್ಕೆಗೆ (ಕೊರೊನಾ ವಾರಿಯರ್ಸ್‌) ತಜ್ಞರ ಸಮಿತಿ ರಚನೆ ಮಾಡಲಾಗಿದೆ.   ಎಂ.ಗೌತಮ್‌ಕುಮಾರ್‌, ಮೇಯರ್‌

Advertisement
Advertisement

Udayavani is now on Telegram. Click here to join our channel and stay updated with the latest news.

Next