Advertisement

ರಾಜ್ಯೋತ್ಸವ ಸರಳ ಆಚರಣೆಗೆ ನಿರ್ಧಾರ

03:04 PM Oct 16, 2020 | Suhan S |

ಚಿಕ್ಕಬಳ್ಳಾಪುರ: ಕೋವಿಡ್‌-19 ತುರ್ತು ಸಂದರ್ಭದಲ್ಲಿ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಇರುವ ಕಾರಣ ಸರಳವಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

Advertisement

ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್‌ ಕಾರಣ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆ ಕಾರ್ಯಕ್ರಮ ಆಯೋಜಿಸುವಂತಿಲ್ಲ ಹಾಗೂ ಕೋವಿಡ್ ವೈರಸ್‌ ಹರುಡುವಿಕೆ ಮುನ್ನಚ್ಚರಿಕೆ ಕ್ರಮವಾಗಿ ಕಡ್ಡಾಯವಾಗಿ ಮುಖಗವಸು ಧರಿಸಬೇಕು.ಕಾರ್ಯಕ್ರಮಕ್ಕೆ ಚಿಕ್ಕ ಮಕ್ಕಳು ಸೇರಿದಂತೆ 60 ವರ್ಷಮೇಲ್ಪಟ್ಟ ಹಿರಿಯರು ಕಾರ್ಯಕ್ರಮದಲ್ಲಿ ಭಾಗವಹಿಸುವುವಂತಿಲ್ಲ.

ಪ್ರಶಸ್ತಿ: ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಕಾರ್ಯ ಕ್ರಮದಲ್ಲಿ ಭಾಗವಹಿಸಬೇಕು. ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಭಾಷೆ, ನಾಡು ನುಡಿ, ಕಲೆ, ಮತ್ತು ಸಂಸ್ಕೃತಿ, ಕ್ರೀಡೆ ಮತ್ತು ಸಂಗೀತ ಕ್ಷೇತ್ರಗಳ 5 ಜನರಿಗೆ ಕನ್ನಡರಾಜ್ಯೋತ್ಸವ ಪ್ರಶಸ್ತಿ ಹಾಗೂ ಸರ್ಕಾರಿ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲಾಗುತ್ತದೆ ಎಂದು ತಿಳಿಸಿದರು. ಜಿಪಂ ಸಿಇಒ ಪಿ.ಶಿವಶಂಕರ್‌, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌, ಅಪರ ಜಿಲ್ಲಾಧಿಕಾರಿ ಎಚ್‌.ಅಮರೇಶ್‌ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದಅಧಿಕಾರಿಗಳುಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕೆರೆಗಳ ಸಂರಕ್ಷಣೆ ಅನಿವಾರ್ಯ: ಮೌನಿಕಾ :

ಪಾತಪಾಳ್ಯ: ಅಂತರ್ಜಲ ಕುಸಿತದಿಂದಾಗಿ ಕುಡಿಯುವ ನೀರಿಗೂ ತೀವ್ರ ಸಮಸ್ಯೆ ಎದುರಾಗುತ್ತಿರುವ ಸಂದರ್ಭದಲ್ಲಿ ಕೆರೆಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ನರೇಗಾ ಜೆ.ಇ.ಮೌನಿಕಾ ತಿಳಿಸಿದರು.

Advertisement

ದಾಸರವಾರಪಲ್ಲಿ ಕೆರೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಕಾರ್ಮಿಕರು ಮಾಡುತ್ತಿದ್ದಹೂಳೆತ್ತುವ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಆಧುನಿಕತೆ ಬೆಳೆದಂತೆಕೆರೆಗಳ ಸಂರಕ್ಷಣೆ ಮಾಡದೆ ಬಹುತೇಕ ಕೆರೆ ಕಟ್ಟೆಗಳು ಹೂಳು ತುಂಬಿಕೊಂಡು ಮುಚ್ಚಿ ಹೋಗುತ್ತಿದೆ. ಇನ್ನು ಕೆಲವು ಕೆರೆಗಳು ಕಣ್ಮರೆಯಾಗುತ್ತಿವೆ. ಇಂತಹಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ಇರುವ ಕೆರೆಗಳಹೂಳೆತ್ತುವಮೂಲಕಅವುಗಳನ್ನುಉಳಿಸಿಕೊಳ್ಳುವಮಹತ್ವದಕೆಲಸ ಆಗಬೇಕಾಗಿದೆ. ಕೆರೆಗಳನ್ನು ಸಂರಕ್ಷಿಸುವತ್ತ ಗ್ರಾಮೀಣ ಜನತೆ ಮುಂದಾಗಬೇಕಾಗಿದೆ ಎಂದರು.

ಪಿಡಿಒಎಂ.ಅಬೂಬಕರ್‌ ಸಿದ್ದೀಕ್‌ಮಾತನಾಡಿ,ಕೆರೆಯಲ್ಲಿ ನೀರಿದ್ದರೆ ಜಾನುವಾರುಗಳಿಗೆ ಅನುಕೂಲ, ಅಂತರ್ಜಲ ಹೆಚ್ಚಳ ಆಗುತ್ತದೆ. ಜನರು ಶ್ರಮದಾನ ಮೂಲಕ ಕೆರೆ ಹೂಳೆತ್ತಿದ್ದಲ್ಲಿ ನೀರಿನ ಮಿತ ಬಳಕೆಯೂ ಸಾಧ್ಯವಾಗುತ್ತದೆ ಎಂದರು. ಉದ್ಯೋಗ ಖಾತ್ರಿ ಯೋಜನೆಯ ಅಭಿಯಂತರ ವೆಂಕಟೇಶ್‌, ಡಿಇಒ ಆದಿರೆಡ್ಡಿ, ಗ್ರಾಮದ ನರಸಿಂಹಪ್ಪ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next