Advertisement

ದತ್ತಮಾಲೆ ಕಾರ್ಯಕ್ರಮ ಸರಳವಾಗಿ ಆಚರಿಸಿ

05:10 PM Nov 12, 2020 | Suhan S |

ಚಿಕ್ಕಮಗಳೂರು : ನ. 26ರಂದು ಶ್ರೀರಾಮಸೇನೆ ವತಿಯಿಂದ ನಡೆಯಲಿರುವ ದತ್ತಮಾಲೆ ಕಾರ್ಯಕ್ರಮವನ್ನು ಈ ಬಾರಿ ಕೋವಿಡ್‌-19ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸುವಂತೆ ಜಿಲ್ಲಾಧಿ ಕಾರಿ ಡಾ| ಬಗಾದಿ ಗೌತಮ್‌ ಶ್ರೀರಾಮಸೇನೆ ಕಾರ್ಯಕರ್ತರಿಗೆ ತಿಳಿಸಿದರು.

Advertisement

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾ ಸಂಸ್ಥೆಗೆ ಶ್ರೀರಾಮಸೇನೆ ಕಾರ್ಯಕರ್ತರುಆಗಮಿಸುವ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್‌ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಈ ಬಾರಿ ಕನಿಷ್ಟ 100ಜನ ಸೇರಲು ಅವಕಾಶವಿದ್ದು, ದತ್ತಮಾಲೆಯಲ್ಲಿಭಾಗವಹಿಸುವ ಎಲ್ಲರೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಬೇಕು. ಮೆರವಣಿಗೆ, ಶೋಭಾಯಾತ್ರೆಗೆ ಅವಕಾಶವಿಲ್ಲ,ಬೆಟ್ಟಕ್ಕೆ ದೊಡ್ಡ ಚಾರ್ಸಿಯ ಬಸ್‌ಗಳಲ್ಲಿ ತೆರಳಲು ಅವಕಾಶವಿಲ್ಲ, ಲಘು ವಾಹನಗಳಲ್ಲಿ ಸಾಮಾಜಿಕಅಂತರ ಕಾಯ್ದುಕೊಂಡು ತೆರಳುವಂತೆ ಹೇಳಿದರು.

ಶ್ರೀರಾಮ ಸೇನೆಯ ಜಿಲ್ಲಾ ಅಧ್ಯಕ್ಷರು ಮಾತನಾಡಿ, ಕೋವಿಡ್‌ ಹಿನ್ನೆಲೆಯಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಪದಾಧಿಕಾರಿಗಳು ಬರದಂತೆ ಸೂಚನೆ ನೀಡಲಾಗಿದೆ. ಆಯಾ ಜಿಲ್ಲೆಗಳಲ್ಲಿ ಅಂದು ದತ್ತಮಾಲೆ ಧರಿಸಿ ಆಯಾ ಜಿಲ್ಲೆಗಳಲ್ಲಿಯೇ ವಿಸರ್ಜಿಸುವಂತೆ ತಿಳಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಹಾಗೂ ಜಿಲ್ಲಾಡಳಿತದ ನಿರ್ಣಯದಂತೆ ಈ ಬಾರಿ ಶೋಭಾಯಾತ್ರೆ ಮಾಡುವಂತಿಲ್ಲ, ಜಿಲ್ಲೆಯಲ್ಲಿ 100 ಜನ ಬಾಬಾಬುಡನ್‌ ಸ್ವಾಮಿ ದರ್ಗಾ ಸಂಸ್ಥೆಗೆ ತೆರಳಲಾಗುವುದು ಎಂದರು.

ಎಸ್ಪಿ ಎಂ.ಎಚ್‌.ಅಕ್ಷಯ್‌ ಮಾತನಾಡಿ, ಯಾವ ವಾಹನಗಳಲ್ಲಿ ಬೆಟ್ಟಕ್ಕೆ ತೆರಳುವ ಬಗ್ಗೆ ಅನುಮತಿಪಡೆಯಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಬ್ಯಾನರ್‌, ಫ್ಲೆಕ್ಸ್‌ ಹಾಕಲು ಅವಕಾಶವಿಲ್ಲ. ನಗರಸಭೆ ಆಯುಕ್ತರು ಸೂಚಿಸಿದ 5 ಕಡೆ ಬ್ಯಾನರ್‌ ಕಟ್ಟಲುಅವಕಾಶ ನೀಡಲಾಗುವುದು ಎಂದು ಹೇಳಿದರು.ನ.26ರಂದು ಬಾಬಾ ಬುಡನ್‌ ಗಿರಿಗೆ ಪ್ರವಾಸಿಗರು ಬರುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದ್ದು, ಪ್ರವಾಸಿಗರು ಅಂದು ಬಾಬಾ ಬುಡನ್‌ ಗಿರಿಗೆ ಆಗಮಿಸದಂತೆ ಜಿಲ್ಲಾಕಾರಿಗಳು ಮನವಿ ಮಾಡಿದರು.

ಬೆಟ್ಟದಲ್ಲಿ ನ.26ರಂದು ತಾತ್ಕಾಲಿಕ ಆಸ್ಪತ್ರೆ ತೆರೆದು ಅಗತ್ಯ ಔಷಧ ಹಾಗೂ ಆ್ಯಂಬುಲೆನ್ಸ್ ಗಳೊಂದಿಗೆ ವೈದ್ಯಾಧಿಕಾರಿಗಳನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ, ತಾತ್ಕಾಲಿಕ ಆಸ್ಪತ್ರೆಯ ಆವರಣಕ್ಕೆ ಸುಣ್ಣ-ಬಣ್ಣ ಬಳಿಯುವುದು ಅವಶ್ಯವಿರುವ ಕಡೆ ಬ್ಯಾರಿಕೇಡ್‌ಗಳನ್ನು ಹಾಕುವುದಲ್ಲದೆ ಸಿ.ಸಿ. ಕ್ಯಾಮರಾ ದುರಸ್ಥಿಗೊಳಿಸಿ ಅವಶ್ಯವಿರುವ ಕಾಮಗಾರಿ ನಿರ್ವಹಣೆ ಮಾಡುವಂತೆ ನಿರ್ಮಿತಿ ಕೇಂದ್ರಕ್ಕೆ ಸೂಚನೆ ನೀಡಿದರು.

Advertisement

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ| ಕುಮಾರ್‌, ಉಪವಿಭಾಗಾಧಿಕಾರಿ ರೇಣುಕಾ ಪ್ರಸಾದ್‌, ಡಿಎಚ್‌ಒ ಡಾ|ಉಮೇಶ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next