Advertisement

ಸರಳ ಗಣರಾಜ್ಯೋತ್ಸವ ಆಚರಣೆ: ಬಗಾದಿ ಗೌತಮ್‌

03:49 PM Jan 14, 2021 | Team Udayavani |

ಚಿಕ್ಕಮಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಕೋವಿಡ್‌-19 ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ|ಬಗಾದಿ ಗೌತಮ್‌ ಹೇಳಿದರು. ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement

ಜ.26 ರಂದು ನಗರದ ಸುಭಾಷ್‌ ಚಂದ್ರಬೋಸ್‌ ಜಿಲ್ಲಾ ಆಟದ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಲಿದೆ ಎಂದ ಅವರು, ವಿವಿಧ ತುಕಡಿಗಳಿಂದ ಪಥ ಸಂಚಲನ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಭಾಗವಹಿಸುವುದಿಲ್ಲ ಎಂದರು. ಸ್ವಾತಂತ್ರÂ ದಿನಾಚರಣೆಯನ್ನು ಕೋವಿಡ್‌-19 ಮಾರ್ಗಸೂಚಿಯನ್ವಯ ಆಚರಿಸಿದ್ದು, ಅದೇ ರೀತಿ ಗಣರಾಜ್ಯೋತ್ಸವ ಕಾರ್ಯಕ್ರಮ ಸಹ ಯಾವುದೇ ಬದಲಾವಣೆ ಗಳಿಲ್ಲದೆ ಸರಳವಾಗಿ ನಡೆಯಲಿದೆ. ಪ್ರತಿ ವರ್ಷದಂತೆ ಜಿಲ್ಲಾ ಮಟ್ಟದಲ್ಲಿ ಸೈಕಲ್‌ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಬಾರಿ ಇರುವುದಿಲ್ಲ ಎಂದರು.

ಇದನ್ನೂ ಓದಿ:ಗ್ರಾಪಂ ಸದಸ್ಯರು ಜನ ಸೇವಕರಾಗಿ ಕೆಲಸ ಮಾಡಲಿ : ರಾಜ್ಯದಲ್ಲಿ ಗೆದ್ದಿದ್ದಾರೆ 5,246 ಬೆಂಬಲಿತರು

ಜಿಲ್ಲೆಯಲ್ಲಿ ಎಲ್ಲೆಲ್ಲಿ ಅಧಿ ಕೃತವಾಗಿ ಗಣರಾಜ್ಯೋತ್ಸವ ಆಚರಣೆಯಾಗಲಿದೆಯೋ ಅಂತಹ ಸ್ಥಳಗಳಲ್ಲಿ ಸರ್ಕಾರದ ಆದೇಶದ ಅನುಸಾರ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರ ಇಟ್ಟು ಆಚರಿಸಬೇಕೆಂದು ತಿಳಿಸಿದರು. ಸಭೆಯಲ್ಲಿ ಅಪರ ಡಿಸಿ ಡಾ|ಕುಮಾರ್‌, ಪೊಲೀಸ್‌ ಉಪ ಅ ಧೀಕ್ಷಕಿ ಶೃತಿ, ಉಪ ವಿಭಾಗಾಧಿ ಕಾರಿ ಡಾ|ಎಚ್‌.ಎಲ್‌. ನಾಗರಾಜ್‌, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next