Advertisement

ಸರಳವಾಗಿ ಕೆಂಪೇಗೌಡ ಜಯಂತಿ ಆಚರಣೆ

06:57 AM Jun 28, 2020 | Lakshmi GovindaRaj |

ಸಕಲೇಶಪುರ: ನಾಡು ಕಟ್ಟುವಲ್ಲಿ ಕೆಂಪೇಗೌಡರ ಪಾತ್ರ ಪ್ರಮುಖ ಎಂದು ಶಾಸಕ ಎಚ್‌.ಕೆ.ಕುಮಾರಸ್ವಾಮಿ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತದಿಂದ ನಡೆದ ಸರಳವಾಗಿ ನಡೆದ ಕೆಂಪೇಗೌಡ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೆಂಪೇಗೌಡರ ದೂರದೃಷ್ಟಿ ಯಿಂದ ಬೆಂಗಳೂರು ನಗರ ನಿರ್ಮಾಣವಾಯಿತು.

Advertisement

ಬೆಂಗಳೂರಿನ ಹಲವು ಕೆರೆ ಗಳನ್ನೂ ಅವರು ಅಭಿವೃದಿಟಛಿಗೊಳಿಸಿ ಮಾದರಿಯಾಗಿದ್ದಾರೆ ಎಂದರು.  ಈ ಸಂದರ್ಭದಲ್ಲಿ ಉಪವಿಭಾಗಾಧಿ ಕಾರಿ ಗಿರೀಶ್‌ ನಂದನ್‌, ತಹಶೀಲ್ದಾರ್‌ ಮಂಜುನಾಥ್‌, ಇಒ ಹರೀಶ್‌ ಮೊದಲಾದವರು ಉಪಸ್ಥಿತರಿದ್ದರು. ಪಟ್ಟಣದ ಒಕ್ಕಲಿಗರ ಭವನದಲ್ಲಿ ತಾಲೂಕು ಒಕ್ಕಲಿಗ ಸಮಾಜದಿಂದ ನಡೆದ  ಕಾರ್ಯಕ್ರಮದಲ್ಲಿ ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಮಾಜಿ ಶಾಸಕ ಎಚ್‌.ಎಂ.ವಿಶ್ವನಾಥ್‌ ಮಾತನಾಡಿ, ಕೋವಿಡ್‌ 19 ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಕೆಂಪೇಗೌಡ ಜಯಂತಿಯನ್ನು ಸರಳ  ವಾಗಿ ಆಚರಿಸಲಾಗುತ್ತಿದೆ ಎಂದರು.

ಲಡಾಖ್‌ನಲ್ಲಿ ಚೈನಾ ಜೊತೆಗೆ ಇತ್ತೀಚೆಗೆ ನಡೆದ ಹೋರಾಟದಲ್ಲಿ ಮೃತ ಸೈನಿಕರಿಗೆ ಹಾಗೂ ಇತ್ತೀಚೆಗೆ ಮೃತಪಟ್ಟ ಒಕ್ಕಲಿಗ ಮುಖಂಡ ಮಲ್ಲೇಶ್‌ ಗೌಡ ಅವರಿಗೆ ಸಂಘದ ವತಿಯಿಂದ ಶ್ರದ್ದಾಂಜಲಿ ಅರ್ಪಿಸಲಾಗುತ್ತಿದೆ ಎಂದರು.  ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷೆ ಶ್ವೇತಾ ಪ್ರಸನ್ನ , ಸಕಲೇಶ್ವರಿ ಒಕ್ಕಲಿಗ ಮಹಿಳಾ ಸಂಘದ ತಾಲೂಕು ಅಧ್ಯಕ್ಷೆ ಶೋಭಾ, ಎಪಿಎಂಸಿ ಅಧ್ಯಕ್ಷ ಕವನ್‌, ಪುರಸಭಾ ಸದಸ್ಯರಾದ ಆದರ್ಶ, ಪ್ರಜ್ವಲ್‌ ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next