Advertisement

Engineering , ವೈದ್ಯ ಕೋರ್ಸ್‌ಗೆ ಏಕಕಾಲದಲ್ಲೇ ಸೀಟು ಹಂಚಿಕೆ

12:19 AM Jul 26, 2024 | Team Udayavani |

ಬೆಂಗಳೂರು: ಎಂಜಿನಿಯರಿಂಗ್‌, ವೈದ್ಯಕೀಯ ಸೇರಿ ಎಲ್ಲ ಕೋರ್ಸುಗಳ ಪ್ರವೇಶಕ್ಕೆ ಈ ಬಾರಿ ಏಕಕಾಲದಲ್ಲೇ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಕರ್ನಾಟಕ ಪರೀûಾ ಪ್ರಾಧಿಕಾರ (ಕೆಇಎ)ಯ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ.

Advertisement

ಮೊದಲ ಸುತ್ತಿನ ಸೀಟು ಹಂಚಿಕೆಗೆ ಆದ್ಯತೆಗಳನ್ನು ದಾಖಲಿಸಲು ಎಂಜಿನಿಯ ರಿಂಗ್‌, ಪಶುವೈದ್ಯಕೀಯ ಇತ್ಯಾದಿ ಕೋರ್ಸ್‌ಗಳಿಗೆ ಅವಕಾಶ ನೀಡಲಾಗಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ ನೀಟ್‌ ಪರೀಕ್ಷೆಯ ಫ‌ಲಿತಾಂಶದ ಪಟ್ಟಿಯನ್ನು ಕೆಇಎಗೆ ಹಸ್ತಾಂತರಿಸಿದ ನಂತರ ವೈದ್ಯಕೀಯ, ದಂತ ವೈದ್ಯಕೀಯ ಸೇರಿ ಇತರ ವೈದ್ಯಕೀಯ ಕೋರ್ಸುಗಳ ಆದ್ಯತೆಗಳನ್ನು ದಾಖಲಿಸಲು ಅವಕಾಶ ನೀಡಲಾಗುವುದು ಎಂದಿದ್ದಾರೆ.

ಈ ವಾರದಲ್ಲಿ ರಾಷ್ಟ್ರಮಟ್ಟದ ವೈದ್ಯಕೀಯ ಕೌನ್ಸೆಲಿಂಗ್‌ ದಿನಾಂಕಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ಅನಂತರ ರಾಜ್ಯದ ಸೀಟು ಹಂಚಿಕೆಯ ವೇಳಾಪಟ್ಟಿ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಪ್ರತಿನಿತ್ಯ ಕನಿಷ್ಠ ಎರಡು ಬಾರಿ ಕೆಇಎ ವೆಬ್‌ಸೈಟ್‌ಗೆ ಭೇಟಿ ಕೊಡಬೇಕು. ಆ ಮೂಲಕ ಕಾಲಕಾಲಕ್ಕೆ ಕೆಇಎ ಹೊರಡಿಸುವ ಪ್ರಕಟಣೆಗಳನ್ನು ಗಮನಿಸಿ, ಸೂಕ್ತ ತೀರ್ಮಾನಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ದ್ವಿತೀಯ ಪಿಯುಸಿ ಮೂರನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಈ ಹಂತದಲ್ಲಿ ಸೀಟು ಹಂಚಿಕೆಗೆ ಪರಿಗಣಿಸುವುದು ಕಷ್ಟಸಾಧ್ಯ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಕುರಿತು ಸರಕಾರ ನೀಡುವ ಸೂಚನೆ ಪ್ರಕಾರ ಅವರಿಗೂ ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next