Advertisement
ಕ್ಷೇತ್ರಕ್ಕೆ ಮೊದಲ ಉಪ ಚುನಾವಣೆ ಇದಾಗಿದ್ದು, ಚುನಾವಣೆ ಪ್ರಚಾರಕ್ಕೆ ಮಾಜಿ-ಹಾಲಿ ಮುಖ್ಯಮಂತ್ರಿಗಳು, ಮಂತ್ರಿಗಳು ಬಂದಿರುವುದು ಇದೇ ಮೊದಲಾಗಿದೆ. ಹೀಗಾಗಿ ಹಳ್ಳಿಗಳಲ್ಲಿ ಅಖಾಡ ರಂಗೇರಿದೆ. ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.
Related Articles
Advertisement
ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಘಟಾನುಘಟಿ ನಾಯಕರ ಪ್ರಚಾರ ಹಾಗೂ ತಂತ್ರಗಾರಿಗೆ ಎಷ್ಟರ ಮಟ್ಟಿಗೆ ಯಾರಿಗೆ ಸಾಥ್ ನೀಡುತ್ತದೆ ಎಂಬುದನ್ನು ಕಾಯ್ದು ನೋಡಬೇಕಿದೆ. ಮತ್ತೂಂದು ಕಡೆಯಲ್ಲಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ಮತ ವಿಭಜನೆಗೂ ಅವಕಾಶ ಕೊಡುವ ಸಾಧ್ಯತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಮುಸ್ಲಿಂ ಮತಗಳನ್ನು ಕ್ರೊಢೀಕರಿಸಲು ಕಾಂಗ್ರೆಸ್ ಪಕ್ಷದ ನಾಯಕರು ಗಲ್ಲಿ ಗಲ್ಲಿಗಳಲ್ಲಿ ತಮ್ಮದೇ ಆದ ರೀತಿಯ ಪ್ರಚಾರ ನಡೆಸುವ ಮೂಲಕ ಮುಸ್ಲಿಂ ಮತಗಳು ಜೆಡಿಎಸ್ ಪಾಲಾಗದಂತೆ ಪ್ರಯತ್ನ ನಡೆಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಷ್ಠಾನಗೊಳಿಸಿದ ಅಭಿವೃದ್ಧಿ ಕಾರ್ಯಗಳು, ನನ್ನ 10 ವರ್ಷದ ಅಧಿಕಾರದ ಅವಧಿಯಲ್ಲಿ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿವೆ. ನನಗೆ ಕ್ಷೇತ್ರದಲ್ಲಿ ಕೆಲಸ ಮಾಡಲು ಕೂಲಿ ಕೆಲಸ ಕೊಡಿ. -ರಮೇಶ ಭೂಸನೂರ, ಬಿಜೆಪಿ ಅಭ್ಯರ್ಥಿ
ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಮಾಡಿದ ಪ್ರಗತಿಪರ ಕಾರ್ಯಗಳು, ನನ್ನ ತಂದೆ ಶಾಸಕ ದಿ.ಎಂ.ಸಿ. ಮನಗೂಳಿ ಅವರು ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಮತದಾರರಿಗೆ ಮನವರಿಕೆ ಮಾಡಿ ಮತಯಾಚಿಸುತ್ತಿದ್ದು ನನಗೆ ಕ್ಷೇತ್ರದ ಜನತೆ ಮತ ನೀಡುವ ಮೂಲಕ ಆಶೀರ್ವದಿಸಿ ಗೆಲ್ಲಿಸುತ್ತಾರೆಂಬ ಸಂಪೂರ್ಣ ಭರವಸೆಯಿದೆ. -ಅಶೋಕ ಮನಗೂಳಿ, ಕಾಂಗ್ರೆಸ್ ಅಭ್ಯಥಿ ಸಿಂದಗಿ
ಕ್ಷೇತ್ರದ ಅಭಿವೃದ್ಧಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಕೊಡುಗೆ ಅಪಾರ. ಅವರ ಅವಧಿಯಲ್ಲಿ ಮಾಡಿದ ನೀರಾವರಿ ಯೋಜನೆ ಮುಂತಾದ ಅಭಿವೃದ್ಧಿ ಯೋಜನೆಗಳನ್ನು ಜನತೆ ಮರೆತಿಲ್ಲ. ಕ್ಷೇತ್ರದ ಮತದಾರರ ಆಶೀರ್ವಾದದಿಂದ ನಾನು ಕ್ಷೇತ್ರದ ಮೊದಲ ಶಾಸಕಿಯಾಗಿ ಆಯ್ಕೆಯಾಗುತ್ತೇನೆ. -ನಾಜಿಯಾ ಅಂಗಡಿ, ಜೆಡಿಎಸ್ ಅಭ್ಯರ್ಥಿ.
-ರಮೇಶ ಪೂಜಾರ