Advertisement

ಸಿಂದಗಿ ಉಪ ಚುನಾವಣೆಗೆ ಬಿಜೆಪಿ ಸರ್ವ ಸನ್ನದ್ಧ: ಕೂಚಬಾಳ

08:44 PM Mar 27, 2021 | Ganesh Hiremath |

ಸಿಂದಗಿ: ಸಿಂದಗಿ ಉಪ ಚುನಾವಣೆ ಯಾವಾಗ ಘೋಷಣೆ ಮಾಡಿದರು ಬಿಜೆಪಿ ಎದುರಿಸಲು ಸನ್ನದ್ಧವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್‌. ಪಾಟೀಲ ಹೇಳಿದರು.

Advertisement

ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂದಗಿ ಕ್ಷೇತ್ರ ಮೂರು ಅವಧಿ  ಗೆದ್ದಿದೆ. ಈ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಂಡಿತ. ಬಹುಮತಗಳ ಅಂತರದಿಂದ ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದರು.

ಕ್ಷೇತ್ರದಲ್ಲಿ 271ಬೂತ್‌ಗಳು, 70 ಶಕ್ತಿ ಕೇಂದ್ರ, 10 ಮಹಾಶಕ್ತಿ ಕೇಂದ್ರಗಳಲ್ಲಿ ಪ್ರಮುಖರನ್ನು ಮತ್ತು ಬೂತ್‌ ಮಟ್ಟದಲ್ಲಿ ಪಂಚರತ್ನ ಸಮಿತಿ ನೇಮಕ ಮಾಡಲಾಗಿದೆ. ಮಂಡಲದಲ್ಲಿಯೂ ವಿವಿಧ ಮೋರ್ಚಾಗಳ ಪ್ರಮುಖರನ್ನು ನೇಮಕ ಮಾಡಲಾಗಿದೆ. ಈ ಮೂಲಕ ತಳಮಟ್ಟದಿಂದ ಪಕ್ಷವನ್ನು ಸಂಘಟನೆ ಮಾಡುವಲ್ಲಿ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಕೇಂದ್ರದಲ್ಲಿ ಮೋದಿ ಸರ್ಕಾರ, ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರದ ಸಾಧನೆಗಳನ್ನು ಪ್ರತಿಯೊಬ್ಬರ ಮನೆ ಮನೆಗೆ ತಲುಪಿಸಲಾಗುತ್ತಿದೆ. ಈ ಎರಡು ಸರಕಾರದ ಆಡಳಿತಕ್ಕೆ ಜನತೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಎಂದು ಹೇಳಿದರು.

ಉಪ ಚುನಾವಣೆಯಲ್ಲಿ ಪಕ್ಷದ ಸಾಮಾನ್ಯ ಕಾರ್ಯಕರ್ತನು ಟಿಕೆಟ್‌ ಕೇಳಬಹುದು. ಅದಕ್ಕೆ ತನ್ನದೆಯಾದ ಕಟ್ಟುಪಾಡುಗಳಿವೆ. ಉಪ ಚುನವಣೆಯಲ್ಲಿ ಆರು ಜನ ಟಿಕೆಟ್‌ ಆಕಾಂಕ್ಷಿಗಳಿದ್ದಾರೆ. ಟಿಕೆಟ್‌ ಆಕಾಂಕ್ಷಿಗಳು ಇನ್ನೂ ಬರಬಹುದು. ಕ್ಷೇತ್ರದಲ್ಲಿ ಟಿಕೆಟ್‌ ಆಕಾಂಕ್ಷಿಗಳು ಬೇರೆ ಬೇರೆಯಾಗಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದರು. ಇನ್ನು ಮುಂದೆ ಒಗ್ಗಟ್ಟಾಗಿ ಪಕ್ಷದ ಕಾರ್ಯ ಮಾಡುತ್ತಾರೆ. ಅಲ್ಲದೇ ಪಕ್ಷದ ನೀಡಿದ ಸೂಚನೆ ಮೇರೆಗೆ ಉಪ ಚನಾವಣೆ ಪ್ರಚಾರ ಮಾಡುತ್ತಾರೆ ಎಂದು ಹೇಳಿದರು.

ಬಿಜೆಪಿ ಸರ್ವ ಸ್ಪರ್ಶಿ, ಸರ್ವ ವ್ಯಾಪಿ, ವಿಶ್ವವ್ಯಾಪಿಯಾಗಿದೆ. ನರೇಂದ್ರ ಮೋದಿ ಅವರು ಕೇವಲ 6 ವರ್ಷಗಳಲ್ಲಿ ವಿಶ್ವ ನಾಯಕರಾಗಿ ಬೆಳೆದಿದ್ದಾರೆ. ಅವರ ಸಾಧನೆಗಳು ನಮಗೆ ಶ್ರೀರಕ್ಷೆಯಾಗಿವೆ. ಕ್ಷೇತ್ರದಲ್ಲಿ ಕಳೆದ 20 ದಿನಗಳಿಂದ ಸಂಚರಿಸಿ ಕ್ಷೇತ್ರದ ಕಾರ್ಯಕರ್ತರ, ಮತದಾರರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ. ಈ ಸಂಚಾರದಿಂದ ಒಂದು ಅಭಿಪ್ರಾಯ ಬಂದಿದ್ದು ಕ್ಷೇತ್ರದ ಉಪ ಚುನಾವಣೆಯಲ್ಲಿ ಖಂಡಿತವಾಗಿ ಬಹುಮತಗಳ ಅಂತರದಿಂದ ಪಕ್ಷದ ಅಭ್ಯರ್ಥಿ ಗೆಲುವು ನಿಶ್ಚಿತ ಎಂದರು.

Advertisement

ಕೆಲ ದಿನಗಳ ಹಿಂದೆ ಪಕ್ಷದ ತಾಪಂ ಸದಸ್ಯರು ಪತ್ರಿಕಾಗೋಷ್ಠಿ ನಡೆಸಿದ್ದರು. ಆ ಸಂದರ್ಭದಲ್ಲಿ ಕೆಲವೊಂದು ವಿಷಯಗಳನ್ನು ಕಲ್ಪಿತವಾಗಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಅವರು ತಪ್ಪು ಒಪ್ಪಿಕೊಂಡಿದ್ದಾರೆ. ಅವರು ಮಾಡಿದ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಮನವರಿಕೆ ಮಾಡಿಕೊಟ್ಟರು. ಬಿಜೆಪಿ ಶಿಸ್ತಿನ ಪಕ್ಷವಾಗಿದೆ. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯವಾದದ್ದು. ಪಕ್ಷಕ್ಕೆ ಕಾರ್ಯಕರ್ತರೆ ಜೀವಾಳ. ಅವರ ಆಧಾರದಿಂದಲೇ ಪಕ್ಷ ಸಂಘಟನೆಯಾಗುತ್ತಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಮತ್ತು ರಾಜ್ಯದಲ್ಲಿ ಬಿ.ಎಸ್‌. ಯಡಿಯುರಪ್ಪ ಅವರು ಮಾಡಿದ ಸಾಧನೆಗಳನ್ನು ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಮುಟ್ಟಿಸುವ ಕಾರ್ಯ ಮಾಡುತ್ತಿದ್ದಾರೆ. ಎರಡು ಸರಕಾರಗಳ ಸಾಧನೆಗೆ ಜನ ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗಿ ಕಾರ್ಯರ್ತರಾಗುತ್ತಿದ್ದಾರೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಯಾರಿಗೆ ಟಿಕೆಟ್‌ ನೀಡಿದರೂ ಅವರ ಗೆಲುವಿಗಾಗಿ ಎಲ್ಲರೂ ಕಾರ್ಯ ಮಾಡುತ್ತಾರೆ ಎಂದು ಹೇಳಿದರು.

ಮಾಜಿ ಶಾಸಕ ರಮೇಶ ಭೂಸನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರುದ್ರ ಬಾಗಲಕೋಟ, ಮಲ್ಲಿಕಾರ್ಜುನ ಜೋಗುರ, ಜಿಲ್ಲಾ ವಕ್ತಾರ ರಾಜಶೇಖರ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಬಿ.ಎಚ್‌. ಬಿರಾದಾರ, ರಾಜ್ಯ ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಿಲ್ಪಾ ಕುದರಗೊಂಡ, ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಸಿದ್ದನಗೌಡ ಬಿರಾದಾರ ಅಡಕಿ, ಮುತ್ತು ಶಾಬಾದಿ, ಚಂದ್ರಶೇಖರ ನಾಗೂರ, ಶಂಭುಲಿಂಗ ಕಕ್ಕಳಮೇಲಿ, ಕೆಡಿಪಿ ಸದಸ್ಯ ಶಿವು ಬಿರಾದಾರ, ಮಾಧ್ಯಮ ಪ್ರತಿನಿ ಧಿ ಸುದರ್ಶನ ಜಿಂಗಾಣಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next