Advertisement
ರವಿವಾರ ಪಟ್ಟಣದ ರಾಜ ರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಶಾಖೆ ದಿ| ರೇ.ಚ. ರೇವಡಿಗಾರ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ, ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಯುವ ಸಾಹಿತಿ ನಾಗೇಶ ತಳವಾರ ಅತಿಥಿ ಉಪನ್ಯಾಸ ನೀಡಿ, ಪತ್ರಿಕಾ ರಂಗಕ್ಕೂ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಭಂದವಿದೆ. ಪತ್ರಕರ್ತರಾಗುವವರು ಸಾಹಿತ್ಯದ ಒಲವನ್ನು ಬೆಳೆಸಿಕೊಳ್ಳಬೇಕು. ವಿನೂತನ ಬರವಣಿಗೆಯನ್ನು ವ್ಯಕ್ತ ಪಡಿಸುವ ಮೂಲಕ ಹದಗೆಟ್ಟ ವ್ಯವಸ್ಥೆ ಸುಧಾರಿಸುವ ಪ್ರಯತ್ನ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ವರದಿಗಾರ ಶಾಂತು ಹಿರೇಮಠ ಮಾತನಾಡಿ, ಸಮಾಜದ ಓರೆ ಕೋರೆಗಳನ್ನು ಎತ್ತಿ ತೋರಿಸುವುದಷ್ಟೇ ಕಾರ್ಯ ವಿನಃ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ಮಾಡುವುದಲ್ಲ. ಪತ್ರಕರ್ತರಲ್ಲಿ ಪ್ರಾಮಾಣಿಕತೆ, ವೃತ್ತಿ ಗೌರವ ಹೆಚ್ಚಾಗಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಸಾರಂಗಮಠ-ಗಚ್ಚಿನಮಠದ ಡಾ| ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿದರು.
ಪತ್ರಿಕಾ ದಿನಾಚಾರಣೆ ನಿಮಿತ್ತ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಪತ್ರಕರ್ತರು, ವಿವಿಧ ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳು ಸೇರಿದಂತೆ ಸುಮಾರು 44 ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ಕಾನಿಪದ ಜಿಲ್ಲಾಧ್ಯಕ್ಷ ಶರಣು ಮಸಳಿ, ಜಿಲ್ಲಾ ಕಾರ್ಯಕಾರಣಿ ಸದಸ್ಯರಾದ ಇಂದುಶೇಖರ ಮಣೂರ, ಮಲ್ಲಿಕಾರ್ಜುನ ಕೆಂಭಾವಿ, ಆಸ್ಪಾಕ ಕರ್ಜಗಿ, ಶಶಿಕಾಂತ ಮೆಂಡೆಗಾರ, ಗುರುರಾಜ ಗದ್ದನಕೇರಿ, ಡಾ| ಶಿವಾನಂದ ಗುಂಡಳ್ಳಿ, ತಾಲೂಕಾಧ್ಯಕ್ಷ ಆನಂದ ಶಾಬಾದಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಅಲ್ಲಾಪುರ ವೇದಿಕೆಯಲ್ಲಿದ್ದರು.
ಕಾರ್ಯಕ್ರಮದಲ್ಲಿ ತಾಲೂಕಿನ ಪತ್ರಕರ್ತರು ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಸಿಂದಗಿಯ ರಾಗರಂಜನಿಯ ಡಾ| ಪ್ರಕಾಶ ಪ್ರಾರ್ಥಿಸಿದರು. ತಾಲೂಕಾಧ್ಯಕ್ಷ ಆನಂದ ಶಾಬಾದಿ ಸ್ವಾಗತಿಸಿದರು. ಸಿದ್ದಲಿಂಗ ಕಿಣಗಿ ನಿರೂಪಿಸಿದರು. ಪಂಡಿತ ಯಂಪುರೆ ವಂದಿಸಿದರು.