Advertisement

ಉಪಚುನಾವಣೆ ಹಿನ್ನೆಲೆ : ಸಿಂದಗಿ ಪುರಸಭೆ ಅಧ್ಯಕ್ಷ ಹಾಗೂ ಪಿಎಸ್‌ಐ ನಡುವೆ ಮಾತಿನ ಚಕಮಕಿ

08:38 PM Oct 30, 2021 | Team Udayavani |

ಸಿಂದಗಿ : ವಿಧಾನಸಭೆ ಉಪಚುನಾವಣೆ ನಿಮಿತ್ಯ ಪಟ್ಟಣದ ಬಸ್‌ನಿಲ್ದಾಣ ಮುಂಭಾಗದ ಅಂಜುಮನ್ ಕಾಲೇಜಿನಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯೊಂದರಲ್ಲಿ ಜರುಗಿದ ಕ್ಷುಲ್ಲಕ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪುರಸಭೆ ಅಧ್ಯಕ್ಷ ಹಾಗೂ ಪೊಲೀಸ್ ಅಧಿಕಾರಿ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.

Advertisement

ಪಟ್ಟಣದ ಅಂಜುಮನ್ ಕಾಲೇಜಿನಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆ ಸಂಖ್ಯೆ 161ರಲ್ಲಿ ನಡೆದ ಕ್ಷುಲ್ಲಕ ಘಟನೆಗೆ ಸಂಬಂಧಿಸಿದಂತೆ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಮತ್ತು ಪಿಎಸ್‌ಐ ಜಿ.ಎಸ್.ಉಪ್ಪಾರ ನಡುವೆ ಮಾತಿನ ಚಕಮಕಿ ಏರ್ಪಟ್ಟ ಘಟನೆ ನಡೆದಿದ್ದು, ಈ ಮಾತಿನ ಚಕಮಕಿಯೂ ಒಂದು ಹಂತಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳತ್ತದೆ ಎನ್ನುವಷ್ಟರಲ್ಲಿ ಸ್ಥಳದಲ್ಲಿದ್ದ ಇನ್ನುಳಿದ ಪೊಲೀಸ್ ಅಧಿಕಾರಿಗಳು ಮತ್ತು ಕಾಂಗ್ರೆಸ್ಸಿನ ಕೆಲ ಮುಖಂಡರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಘಟನೆ ನಡೆದ ಬಳಿಕ ಸ್ಥಳಕ್ಕಾಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿಯವರು ಪಿಎಸ್‌ಐ ಜಿ.ಎಸ್.ಉಪ್ಪಾರ ಅವರ ಜೊತೆ ಮಾತನಾಡಿ ಪಾರದರ್ಶಕವಾಗಿ ಚುನಾವಣೆ ನಡೆಯಲು ಅವಕಾಶ ಕೊಡಿ ಎಂದು ವಿನಂತಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪಿಎಸ್‌ಐ ಜಿ.ಎಸ್.ಉಪ್ಪಾರ ಅವರು ನಾನು ನಿಸ್ಪಕ್ಷಪಾತವಾಗಿ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ಮಾಡುತ್ತಿದ್ದೇನೆ ಎಂದು ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ.

ಇದನ್ನೂ ಓದಿ :ಪುನೀತ್ ರಾಜ್‌ಕುಮಾರ್ ಅಂತಿಮ ದರ್ಶನ ಪಡೆಯಲು ಹರಿದುಬರುತ್ತಲೇ ಇದೆ ಜನ ಸಾಗರ

Advertisement

Udayavani is now on Telegram. Click here to join our channel and stay updated with the latest news.

Next