ಸಿಂಧನೂರು: ಕಲ್ಯಾಣ ಕರ್ನಾಟಕದಲ್ಲೇ ದೊಡ್ಡ ತಾಲೂಕು ಎಂಬ ಹೆಗ್ಗಳಿಕೆಗೆ ಪಾತ್ರವಾದ ಸಿಂಧನೂರು ನಗರದ ಹೈಟೆಕ್ ಬಸ್ ನಿಲ್ದಾಣ ಮೇಲೆಲ್ಲ, ಥಳಕು, ಒಳಗೆಲ್ಲ ಕೊಳಕು ಎಂಬಂತಿದೆ. ನಿಲ್ದಾಣದಲ್ಲಿ ಸೌಲಭ್ಯಗಳ ಕೊರತೆಯಿಂದ ಗಬ್ಬೆದ್ದು ಹೋಗಿದ್ದರೆ, ಪ್ರಯಾಣಿಕರು ನಿತ್ಯ ಪರದಾಡುವಂತಾಗಿದೆ.
Advertisement
2013-14ರಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಅವರ ಆಡಳಿತಾವಧಿಯಲ್ಲಿ ಸುಮಾರು 6.50 ಕೋಟಿ ವೆಚ್ಚದಲ್ಲಿ ಸಿಂಧನೂರು ನಗರದ ಹೃದಯ ಭಾಗದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಆಗ ಸಾರಿಗೆ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಎಚ್.ಸಿ ಮಹಾದೇವಪ್ಪ ಈ ಹೈಟೆಕ್ ಬಸ್ ನಿಲ್ದಾಣ ಉದ್ಘಾಟಿಸಿದ್ದಾರೆ.
Related Articles
Advertisement
ಕೆಟ್ಟ ಸಿಸಿ ಕ್ಯಾಮೆರಾ: ಬಸ್ ನಿಲ್ದಾಣದಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಗೆ ಹಲವೆಡೆ ಸಿಸಿ ಕ್ಯಾಮೆರಾ ಹಾಕಲಾಗಿದೆ. ಆದರೆ ಇವು ಕಾರ್ಯ ನಿರ್ವಹಿಸುತ್ತಿಲ್ಲ. ಸಿಸಿ ಕ್ಯಾಮೆರಾ ಇದ್ದೂ ಇಲ್ಲದಂತಾಗಿದೆ.
ರಸ್ತೆಗೆ ಹರಿದ ಶೌಚಾಲಯ ಕೊಳಚೆ: ಕಳೆದ ಮೂರ್‍ನಾಲ್ಕು ತಿಂಗಳ ಹಿಂದೆ ಬಸ್ ನಿಲ್ದಾಣದ ಶೌಚಾಲಯದ ಗುಂಡಿಯ ಪೈಪ್ ಒಡೆದು ಕೊಳಚೆ ನೀರು ಬಸ್ ನಿಲ್ದಾಣದ ಪಕ್ಕದ ಮನೆ-ಅಂಗಡಿಗಳ ಮುಂದೇ ಹರಿದಿತ್ತು. ನಿವಾಸಿಗಳು, ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಆದರೂ ನಿಲ್ದಾಣದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಇನ್ನಾದರೂ ಬಸ್ ನಿಲ್ದಾಣದ ಅಧಿಕಾರಿಗಳು ಪ್ರಯಾಣಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಜೊತೆಗೆ ಶೌಚಾಲಯದಲ್ಲಿ ಸ್ವಚ್ಛತೆಗೆ ಗಮನಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬಸ್ ನಿಲ್ದಾಣದಲ್ಲಿ ಸ್ವಚ್ಛತೆಯತ್ತ ಗಮನ ಹರಿಸುವ ಕೆಲಸ ಮಾಡುತ್ತೇವೆ. ಶೌಚಾಲಯದ ಬಗ್ಗೆ ಮೇಲಿನ ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಶೀಘ್ರದಲ್ಲೇ ಇನ್ನೆರಡು ಶೌಚಾಲಯ ನಿರ್ಮಿಸಲಾಗುವುದು.ರವಿಶಂಕರ,
ಸಾರಿಗೆ ಘಟಕ ವ್ಯವಸ್ಥಾಪಕ ಬಸ್ ನಿಲ್ದಾಣದಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಬಸ್ ನಿಲ್ದಾಣದಲ್ಲಿ ಸೌಲಭ್ಯಗಳ ಕೊರತೆ ಬಗ್ಗೆ ಖುದ್ದಾಗಿ ಭೇಟಿ ನೀಡಿ ವೀಕ್ಷಿಸುವೆ.
ವೆಂಕಟರಾವ್ ನಾಡಗೌಡ,
ಶಾಸಕ