Advertisement
ಈ ವೇಳೆ ಮಾತನಾಡಿದ ಸಂಘಟನೆಯ ಗಂಗಮ್ಮ, ಕೋವಿಡ್ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಸಮಯದಲ್ಲಿ ಮದ್ಯ ಮಾರಾಟದ ಅಂಗಡಿಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿರುವುದು ವಿಷಾದದ ಸಂಗತಿ. ಕೋವಿಡ್ ಲಾಕ್‌ಡೌನ್‌ನಿಂದ ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರು ಅನ್ನ ಆಹಾರ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಕೊರತೆಯಿಂದ ಯಾತನೆ ಪಡುವಂತಾಗಿದೆ. ಇದರಿಂದ ರೈತರು, ಕೃಷಿಕೂಲಿ ಕಾರ್ಮಿಕರು, ಬಡವರು, ಸಣ್ಣ ಉದ್ಯಮಿಗಳು, ಆಟೋ ಚಾಲಕರು, ಬೀದಿ ಬದಿ ವ್ಯಾಪಾರಸ್ಥರು, ಕುಶಲಕರ್ಮಿಗಳು ಸಂಕಷ್ಟದ ಕುಲುಮೆಯಲ್ಲಿ ಬೇಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ನೆರವಿಗೆ ಧಾವಿಸಬೇಕಾದ ಸರ್ಕಾರ ಮದ್ಯ ಮಾರಾಟದ ಅಂಗಡಿ ತೆರೆಯಲು ಅನುಮತಿ ನೀಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.
Advertisement
ಮದ್ಯ ಮಾರಾಟ ನಿಷೇಧಕ್ಕೆ ಒತ್ತಾಯ
12:36 PM May 06, 2020 | Naveen |
Advertisement
Udayavani is now on Telegram. Click here to join our channel and stay updated with the latest news.