Advertisement

ಪಬ್‌ ಸಾಂಗ್‌ನಲ್ಲಿ ಸಿಂಧು ಬೋಲ್ಡ್‌  ಸ್ಟೆಪ್

03:17 PM May 01, 2022 | Team Udayavani |

ನಟಿ ಸಿಂಧು ಲೋಕನಾಥ್‌ ಹೊಸ ಸಿನಿಮಾದ ಹಾಡೊಂದರಲ್ಲಿ ಸಖತ್‌ ಹಾಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಅದು 1975. ವಸಿಷ್ಠ ಬಂಟನೂರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಪಬ್‌ ಸಾಂಗ್‌ನಲ್ಲಿ ಸಿಂಧು ಕಾಣಿಸಿಕೊಂಡಿದ್ದಾರೆ.

Advertisement

ಜಯ್‌ ಶೆಟ್ಟಿ, ಮಾನಸ, ವೆಂಕಟೇಶ್‌ ಪ್ರಸಾದ್‌ ಸೇರಿದಂತೆ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ.

ಹಾಡಿನ ಬಗ್ಗೆ ಮಾತನಾಡುವ ಸಿಂಧು, “ನನ್ನ ಸಿನಿಮಾ ಜರ್ನಿಯಲ್ಲಿ ಈ ರೀತಿ ಸ್ಪೆಷಲ್‌ ಸಾಂಗ್‌ಗೆ ಹೆಜ್ಜೆ ಹಾಕಿರುವುದು ಇದೇ ಮೊದಲು. ಸಾಂಗ್‌ ತುಂಬಾ ಚೆನ್ನಾಗಿದೆ. ಈ ಸಾಂಗ್‌ ಪ್ರತಿಯೊಬ್ಬರಿಗೂ ಇಷ್ಟವಾಗುತ್ತದೆ’ ಎಂದರು.

ಇದನ್ನೂ ಓದಿ:ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ತುಳುನಾಡ ಬೆಡಗಿ ರಚನಾ ರೈ

ಪ್ರೊಡಕ್ಷನ್‌ ಸಿಲ್ವರ್‌ ಸ್ಕ್ರೀನ್‌ ಫಿಲಂ ಫ್ಯಾಕ್ಟರಿ ಬ್ಯಾನರ್‌ನಡಿ ದಿನೇಶ್‌ ರಾಜನ್‌ ಸಿನಿಮಾಗೆ ಬಂಡವಾಳ ಹೂಡಿದ್ದು, ಬೆಂಗಳೂರು, ಉಡುಪಿ ಸೇರಿದಂತೆ ಚಿತ್ರೀಕರಣ ನಡೆದಿದೆ. ಈಗಾಗಲೇ ಶೂಟಿಂಗ್‌ ಮುಗಿಸಿರುವ ಚಿತ್ರ ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ಬಿಝಿಯಾಗಿದೆ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next