ಸಿಂಗಾಪುರ್: 1990ರ ದಶಕದ ಕಾಶ್ಮೀರ್ ಕಣಿವೆಯಿಂದ ಹಿಂದೂಗಳು ವಲಸೆ ಹೋದ ಕಥಾಹಂದರದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಸಿಂಗಾಪುರ್ ಸರ್ಕಾರ ನಿಷೇಧಿಸಿದೆ. ವಿವಿಧ ಸಮುದಾಯಗಳ ನಡುವೆ ದ್ವೇಷ ಹರಡಿಸುವ ಸಾಧ್ಯತೆ ಇದ್ದಿರುವುದಾಗಿ ಸಿಂಗಾಪುರ್ ಕಳವಳ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:JDS ತಂಟೆಗೆ ಬಂದವರು ಬೀದಿ ಪಾಲಾಗಿದ್ದಾರೆ : ಪಕ್ಷ ತೊರೆಯಲು ಮುಂದಾದ ನಾಯಕರಿಗೆ HDK ತಿರುಗೇಟು
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಸಿಂಗಾಪೂರ್ ಸಿನಿಮಾ ವರ್ಗೀಕರಣ ಮಾರ್ಗಸೂಚಿಗಿಂತ ಹೊರತಾಗಿದೆ ಎಂದು ಹೇಳಿರುವುದಾಗಿ ಪಿಟಿಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಕಾಶ್ಮೀರದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಕಿರುಕುಳಕ್ಕೊಳಗಾಗಿರುವ ಚಿತ್ರಣವನ್ನು ಪ್ರಚೋದನಕಾರಿ ಮತ್ತು ಏಕಮುಖವಾಗಿ ದ ಕಾಶ್ಮೀರ್ ಫೈಲ್ಸ್ ನಲ್ಲಿ ಚಿತ್ರಿಕರೀಸಲಾಗಿದೆ ಎಂದು ಸಿಂಗಾಪುರ್ ಸರ್ಕಾರ ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಏಕಮುಖ ಚಿತ್ರಣದಿಂದ ವಿವಿಧ ಸಮುದಾಯಗಳ ನಡುವೆ ದ್ವೇಷ ಹುಟ್ಟುಹಾಕುವ ಸಾಧ್ಯತೆ ಇದೆ. ಅಲ್ಲದೇ ಸಾಮಾಜಿಕ ಸ್ವಾಸ್ಥ್ಯ ಹಾಗೂ ಧಾರ್ಮಿಕ ಸಾಮರಸ್ಯ ಹದಗೆಡಲಿದೆ ಎಂದು ಸಿಂಗಾಪುರ್ ಸರ್ಕಾರ ಪ್ರಕಟಣೆಯಲ್ಲಿ ವಿವರಿಸಿದೆ.
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದ ಕಾಶ್ಮೀರ್ ಫೈಲ್ಸ್ ಸಿನಿಮಾ ಮಾರ್ಚ್ 11ರಂದು ತೆರೆ ಕಂಡಿತ್ತು. ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷೆಗೂ ಮೀರಿ ಹಣ ಗಳಿಸಿತ್ತು. ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಬಿಜೆಪಿ ಮುಖಂಡರು ಹೊಗಳಿದ್ದರು.