Advertisement
ಈ ಕುರಿತು ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಟ್ವೀಟ್ ಮಾಡಿ ಸಿಂಗಾಪುದಲ್ಲಿ ನೆಲೆಸಿರುವ ಮಂಗಳೂರಿಗರಿಗೆ ತಮ್ಮ ಊರುಗಳಿಗೆ ಬರಲು ಮತ್ತು ಮಂಗಳೂರಿನಲ್ಲಿ ಹೂಡಿಕೆಗೆ ಈ ಸೌಕರ್ಯ ನೆರವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಆ್ಯಕ್ಟ್ ಈಸ್ಟ್ ಪಾಲಿಸಿ ಜೋಡಣೆ ಮತ್ತು ವ್ಯಾಪಾರ ವಹಿವಾಟಿಗೆ ಉತ್ತೇಜನ ನೀಡುವಂತಿದೆ. ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ ಸೇವೆ ಬೇಕೆಂಬ ಬೇಡಿಕೆ ಇತ್ತು. ಈ ಕುರಿತಂತೆ ನಾಗರಿಕ ವಿಮಾನಯಾನ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದೆ. ಇದೀಗ ನೇರ ವಿಮಾನ ಸಂಪರ್ಕಕ್ಕೆ ಒಪ್ಪಿಗೆ ದೊರೆತಿದೆ ಎಂದು ತಿಳಿಸಿದ್ದಾರೆ.
2025ರ ಫೆ.1ರಿಂದ ಮಂಗಳೂರಿನಿಂದ ಹೊಸದಿಲ್ಲಿಗೆ ಪ್ರತಿದಿನ ನಾನ್ ಸ್ಟಾಪ್ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಯಾನ ಆರಂಭವಾಗಲಿದೆ. ಪ್ರತಿ ಶನಿವಾರ ಮಂಗಳೂರು- ಪುಣೆ ನಡುವೆ ಎರಡು ನೇರ ವಿಮಾನಯಾನ ಸೌಲಭ್ಯ ಕೂಡ ಆರಂಭಿಸುವುದಾಗಿ ಏರ್ ಇಂಡಿಯಾ ಘೋಷಿಸಿದೆ.
Related Articles
Advertisement
ಮಂಗಳೂರಿನಿಂದ ಪುಣೆಗೆ ಶನಿವಾರ ಬೆಳಗ್ಗೆ 8 ಗಂಟೆಗೆ ಹೊರಡುವ ವಿಮಾನ 9.25ಕ್ಕೆ ಪುಣೆ ತಲುಪಲಿದೆ. ಪುಣೆಯಿಂದ 9.55ಕ್ಕೆ ಹೊರಟು 11.40ಕ್ಕೆ ಮಂಗಳೂರು ತಲುಪಲಿದೆ. ಅದೇ ರೀತಿ ಸಂಜೆ 6.30ಕ್ಕೆ ಮಂಗಳೂರಿನಿಂದ ಹೊರಟು 8 ಗಂಟೆಗೆ ಪುಣೆ ತಲುಪಲಿದೆ. ಪುಣೆಯಿಂದ ರಾತ್ರಿ 8.35ಕ್ಕೆ ಹೊರಟು 10.05ಕ್ಕೆ ಮಂಗಳೂರು ತಲುಪಲಿದೆ.
ಇದನ್ನೂ ಓದಿ: ಮಂಗಳೂರು ನಗರ ಭಾಗದ ರೈಲ್ವೆ ಮಾರ್ಗ ನೈರುತ್ಯ ರೈಲ್ವೆಯಡಿ ಕಾರ್ಯನಿರ್ವಹಿಸಲು ಪ್ರಸ್ತಾಪ