ಉತ್ತರ ಪ್ರದೇಶ: ಗಾಯಕಿ ವಿಜಯ್ ಲಕ್ಷ್ಮಿ ಅಲಿಯಾಸ್ ಮಲ್ಲಿಕಾ ರಜಪೂತ್(35) ಅವರು ಮಂಗಳವಾರ ತಮ್ಮ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಗಾಯಕಿಯ ಮೃತದೇಹ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸೀತಾಕುಂಡ್ ಪ್ರದೇಶದ ತನ್ನ ಮನೆಯ ಕೋಣೆಯಲ್ಲಿ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾತ್ರಿ ಮನೆಯವರೆಲ್ಲ ಮಲಗಿದ್ದ ಕಾರಣ ಯಾವಾಗ ಈ ಘಟನೆ ನಡೆದಿದೆ ಎಂಬುದು ಗೊತ್ತಾಗಲಿಲ್ಲ ಎಂದು ಮಲ್ಲಿಕಾ ತಾಯಿ ಸುಮಿತ್ರಾ ಸಿಂಗ್ ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಕೊತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿ ಶ್ರೀರಾಮ್ ಪಾಂಡೆ ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತೋರುತ್ತದೆ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಹೆಚ್ಚಿನ ವಿವರ ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Pak ಪ್ರಧಾನಿ ಸ್ಥಾನಕ್ಕೆ ಶೆಹಬಾಜ್, ಪಂಜಾಬ್ ಸಿಎಂ ಆಗಿ ಮರ್ಯಮ್ ನಾಮನಿರ್ದೇಶನ