Advertisement

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

10:27 PM Oct 26, 2021 | Team Udayavani |

ಉಡುಪಿ: ಅಕ್ಟೋಬರ್‌ 28ರಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಎಲ್ಲ ಜಿಲ್ಲೆಗಳ ಪ್ರಮುಖ ಪ್ರವಾಸಿ ತಾಣಗಳಲ್ಲಿ ಏಕಕಾಲದಲ್ಲಿ ಕನ್ನಡದ ಶ್ರೇಷ್ಠತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳನ್ನು ಹಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ಸೂಚನೆ ನೀಡಿದರು.

Advertisement

ಮಂಗಳವಾರ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಅವರು ಸೂಚನೆ ನೀಡಿದರು.

ವ್ಯವಸ್ಥಿತ ದಾಖಲೀಕರಣ
ಇದನ್ನು ಸರಕಾರಿ ಕಾರ್ಯಕ್ರಮವಾಗಿ ಮಾತ್ರ ನಡೆಸದೆ ಎಲ್ಲ ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಭೂತಪೂರ್ವವಾಗಿ ಆಯೋಜಿಸಿ, ಎಲ್ಲ ಜಿಲ್ಲೆಗಳಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಆನ್‌ಲೈನ್‌ ಮೂಲಕ ಸಹ ವೀಕ್ಷಿಸಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಿ, ಕಾರ್ಯಕ್ರಮದ ಸಂಪೂರ್ಣ ವೀಡಿಯೋ ಚಿತ್ರೀಕರಣ, ಡ್ರೋನ್‌ ಚಿತ್ರೀಕರಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಜನಸಂಖ್ಯೆಯ ವಿವರಗಳನ್ನು ವ್ಯವಸ್ಥಿತ ರೀತಿಯಲ್ಲಿ ದಾಖಲೀಕರಣ ಮಾಡಬೇಕು ಎಂದರು.

ಇದನ್ನೂ ಓದಿ:ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಆದೇಶ ಮರುಪರಿಶೀಲನೆಗೆ ಹೈಕೋರ್ಟ್‌ ಸೂಚನೆ

ಕನ್ನಡ ಬಳಕೆ ಸಂಕಲ್ಪ
ಕಾರ್ಯಕ್ರಮದಲ್ಲಿ ಯಾವುದೇ ಭಾಷಣ ಬೇಡ. 10.45ಕ್ಕೆ ನಿಗದಿತ ಜಾಗದಲ್ಲಿ ಸೇರಿ ಸೇರಿ ಸರಿಯಾಗಿ 11 ಗಂಟೆಗೆ ಹಾಡಲು ಆರಂಭಿಸಬೇಕು. ಈ 3 ಗೀತೆಗಳ ಜತೆಗೆ ಕನ್ನಡ ನಾಡು ನುಡಿಯ ಮಹತ್ವ ಸಾರುವ ಇತರ ಗೀತೆಗಳನ್ನು ಹಾಡಬಹುದಾಗಿದ್ದು, ಕೊನೆಯಲ್ಲಿ ಕನ್ನಡದ ಬಳಕೆ ಕುರಿತು ಸಂಕಲ್ಪ ಮಾಡಬೇಕು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next