Advertisement
ಈ ಸಂಯೋಜಿತ ಸೀಟು ಹಂಚಿಕೆಯ ಪ್ರಕಾರ ಅಭ್ಯರ್ಥಿಯು ಆಪ್ಷನ್ ಎಂಟ್ರಿ ಮಾಡುವಾಗ ತನ್ನ ಮೊದಲ ಆದ್ಯತೆಯ ಕೋರ್ಸ್‌ಗಳನ್ನು ಮೊದಲು ದಾಖಲಿಸಬೇಕು. ಒಂದು ವೇಳೆ ಮೊದಲ ಆದ್ಯತೆಯ ಕೋರ್ಸ್ ಸಿಗದಿದ್ದರೆ ಅದರ ಅನಂತರದ ಆಯ್ಕೆಯ ಕೋರ್ಸ್ ಯಾವುದು ಎನ್ನುವುದನ್ನು ಎರಡನೇ ಆದ್ಯತೆಯಾಗಿ ದಾಖಲಿಸಬೇಕು. ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಎಷ್ಟು ಕೋರ್ಸ್‌ಗಳು ಇವೆಯೋ ಅಷ್ಟೂ ಕೋರ್ಸ್‌ಗಳಿಗೆ ಆದ್ಯತೆಯನುಸಾರ ಆಪ್ಷನ್ ಎಂಟ್ರಿ ಮಾಡುವುದರ ಮೂಲಕ ಸೀಟು ಪಡೆಯಬಹುದು.
Related Articles
Advertisement
ಮಾಪ್‌ಅಪ್ ಸುತ್ತುಎರಡನೇ ಸುತ್ತಿನಲ್ಲಿ ಎಂಜಿನಿಯರಿಂಗ್, ನರ್ಸಿಂಗ್, ಆರ್ಕಿಟೆಕ್ಚರ್, ಪಶು ವೈದ್ಯಕೀಯ, ಕೃಷಿ – ಸೀಟು ದೊರೆತ ಅಭ್ಯರ್ಥಿಗಳು ದಂಡ ಪಾವತಿಸಿ, ತಮ್ಮ ಸೀಟನ್ನು ರದ್ದುಪಡಿಸಿದ ಅನಂತರವೇ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ನ ಮಾಪ್‌ಅಪ್ ಸುತ್ತಿನಲ್ಲಿ ಭಾಗವಹಿಸಬಹುದು. ಅದೇ ರೀತಿ 2ನೇ ಸುತ್ತಿನಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಸೀಟುಗಳು ಹಂಚಿಕೆಯಾದ ಅಭ್ಯರ್ಥಿಗಳು ಸದರಿ ಸೀಟುಗಳನ್ನು ದಂಡ ಪಾವತಿಸಿ ರದ್ದುಪಡಿಸಿದ ಅನಂತರ ಎಂಜಿನಿಯರಿಂಗ್ ಮಾಪ್‌ಅಪ್ ಸುತ್ತಿನಲ್ಲಿ ಭಾಗವಹಿಸಬಹುದು. ಈ ಹೊಸ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿರುವ ಕೆಇಎಯ ಕಾಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್, ಪಶುವೈದ್ಯ, ಕೃಷಿ, ನರ್ಸಿಂಗ್, ಅರ್ಕಿಟೆಕ್ಟ್ ಹಾಗೂ ಫಾರ್ಮಸಿ ಕೋರ್ಸ್‌ಗಳ ಪ್ರವೇಶಕ್ಕೆ ಸಂಯೋಜಿತ ಸೀಟು ಹಂಚಿಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಪ್ರತ್ಯೇಕ ಸೀಟು ಹಂಚಿಕೆ ಪ್ರಕ್ರಿಯೆಯಿಂದಾಗಿ ಸಾಕಷ್ಟು ಅನನುಕೂಲಗಳು ಇದ್ದವು. ಒಬ್ಬ ಅಭ್ಯರ್ಥಿ ಒಮ್ಮೆಗೇ ಒಂದಕ್ಕಿಂತ ಹೆಚ್ಚು ಕೋರ್ಸ್‌ಗಳಲ್ಲಿ ಸೀಟು ಪಡೆದು, ಅನಂತರ ಯಾವುದಾದರೂ ಒಂದಕ್ಕೆ ಪ್ರವೇಶ ಪಡೆಯುವವರೆಗೂ ಉಳಿದ ಕೋರ್ಸ್‌ಗಳಲ್ಲಿನ ಸೀಟು ಬೇರೆ ಅಭ್ಯರ್ಥಿಗಳಿಗೆ ಲಭ್ಯವಾಗುತ್ತಿರಲಿಲ್ಲ. ಇದರಿಂದ ಪ್ರತಿಭಾವಂತರಿಗೆ ಆಯ್ಕೆ ಸುತ್ತಿನಲ್ಲಿ ಸೀಟು ಕೈತಪ್ಪುತ್ತಿತ್ತು ಎಂದು ಹೇಳಿದ್ದಾರೆ. ಅಭ್ಯರ್ಥಿಗಳು ಯಾವುದೇ ಕೋರ್ಸ್‌ಗೆ ಪ್ರವೇಶ ಬಯಸಿದ್ದಲ್ಲಿ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಶುಲ್ಕ ಮತ್ತು ಲಭ್ಯವಿರುವ ಸೀಟುಗಳನ್ನು ಪರಿಶೀಲಿಸಿ, ಬಳಿಕ ತಮ್ಮ ಆದ್ಯತೆಯನುಸಾರ ಸೀಟುಗಳ ಆಪ್ಷನ್ ಎಂಟ್ರಿ ಮಾಡಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಅನಗತ್ಯ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಈ ಸುಧಾರಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.