Advertisement

ಬಿಎಸ್ ವೈ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಏಕೈಕ ಮಹಿಳಾ ಸಚಿವೆ ಶಶಿಕಲಾ ಜೊಲ್ಲೆ

09:46 AM Aug 21, 2019 | keerthan |

ಬೆಳಗಾವಿ: ಬಿಜೆಪಿ ನಿಷ್ಠಾವಂತ ಕಾರ್ಯಕರ್ತೆ ಹಾಗೂ ಪಕ್ಷದಲ್ಲಿ ಒಳ್ಳೆಯ ಇಮೇಜ್ ಹೊಂದಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ನಿರೀಕ್ಷೆಯಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವ ಸ್ಥಾನ ಗಿಟ್ಟಿಸಿದ್ದಾರೆ.

Advertisement

ಅರ್ ಎಸ್ ಎಸ್ ನಾಯಕರ ಜೊತೆ ಉತ್ತಮ ಸಂಬಂಧ ಹಾಗೂ ನಿಕಟ ಸಂಪರ್ಕ ಮೇಲಾಗಿ ಪತಿ ಅಣ್ಣಾಸಾಹೇಬ ಜೊಲ್ಲೆ ಸಂಸದರಾಗಿರುವದು ಶಶಿಕಲಾ ಜೊಲ್ಲೆ ಅವರಿಗೆ ಸಚಿವ ಸ್ಥಾನ ಪಡೆದುಕೊಳ್ಳಲು ನೆರವಾಗಿದೆ. ಇದಲ್ಲದೆ ಕಳೆದ ಲೋಕಸಭಾ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರ ತೆರೆಮರೆಯಲ್ಲಿ ಕೆಲಸ ಮಾಡಿದ್ದ ರಮೇಶ್ ಜಾರಕಿಹೊಳಿ ಅವರ ಸಹಾಯ ಸಹ ಶಶಿಕಲಾ ಜೊಲ್ಲೆ ಅವರ ಹಿಂದಿದೆ ಎಂದು ಮೂಲಗಳು ತಿಳಿಸಿವೆ.

2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ಮೊದಲ ಬಾರಿಗೆ ವಿಧಾನಸಭೆ ಮೆಟ್ಟಿಲು ಹತ್ತಿದ ಶಶಿಕಲಾ ಜೊಲ್ಲೆ ವೃತ್ತಿಯಲ್ಲಿ ಉದ್ಯಮಿಯಾಗಿದ್ದಾರೆ . ಇವರು ಗಡಿ ಭಾಗದ ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನಲ್ಲಿ ಶೈಕ್ಷಣಿಕ ಸಂಸ್ಥೆಗಳು ಹಾಗೂ ಸಹಕಾರಿ ಬ್ಯಾಂಕ್ ಗಳನ್ನು ಹೊಂದಿದ್ದಾರೆ. ಪತಿ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಾಸಕಿ ಶಶಿಕಲಾ ಜೊಲ್ಲೆ ಒಟ್ಟಾಗಿ ಈ ಉದ್ಯಮಗಳನ್ನು ನೋಡಿಕೊಳ್ಳುತ್ತಿದ್ದಾರೆ.

ಬೆಳಗಾವಿ ಜಿಲ್ಲೆ ಹಾಗೂ ಉತ್ತರ ಕರ್ನಾಟಕದಿಂದ ಬಿಜೆಪಿ ಯ ಏಕೈಕ ಮಹಿಳಾ ಶಾಸಕಿಯಾಗಿರುವ ಶಶಿಕಲಾ ಜೊಲ್ಲೆ ಪಿಯುಸಿ ಶಿಕ್ಷಣ ಪಡೆದಿದ್ದಾರೆ. ರಾಜಕೀಯ ಪ್ರವೇಶದ ನಂತರ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಗಕ್ಷರಾಗಿ ಸಹ ಕೆಲಸ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next