Advertisement

Siraguppa: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ

01:58 PM Jun 29, 2024 | Team Udayavani |

ಸಿರುಗುಪ್ಪ: ನಗರದ ಪೊಲೀಸ್‌ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆಯ ನಿರೀಕ್ಷಕರು ನೀಡಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ 45 ಚೀಲ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.

Advertisement

ಸೀಮಾಂಧ್ರ ಪ್ರದೇಶದ ಹೊಳಗುಂದಿ ಗ್ರಾಮದ ಕಡೆಯಿಂದ ಸಿರುಗುಪ್ಪ ಪಟ್ಟಣದ ಕಡೆಗೆ ಟಾಟಾ ಕಂಪನಿಯ ಗೂಡ್ಸ್ ವಾಹನದಲ್ಲಿ 13 ಕ್ವಿಂಟಲ್ 50 ಕೆ.ಜಿ.ಯ ರೂ.39150/-ಮೌಲ್ಯದ ಅಕ್ಕಿಯನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳು ನೀಡಿದ ಖಚಿತ ಮಾಹಿತಿ ಮೇರೆಗೆ ನಗರದ ಆದೋನಿ ರಸ್ತೆಯಲ್ಲಿ ಪೊಲೀಸರು ದಾಳಿ ಮಾಡಿ ಅಕ್ಕಿ ಮತ್ತು ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ವಶಪಡಿಸಿಕೊಂಡಿದ್ದು, ಈ ಬಗ್ಗೆ ಸಿರುಗುಪ್ಪ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: CM Change Issue; ಹೈಕಮಾಂಡ್ ನಿಯಮಗಳನ್ನು ಪಾಲಿಸುತ್ತೇವೆ.. ಮಧು ಬಂಗಾರಪ್ಪ ಪ್ರತಿಕ್ರಿಯೆ

Advertisement

Udayavani is now on Telegram. Click here to join our channel and stay updated with the latest news.

Next