Advertisement

ಮಠ ಅಭಿವೃದ್ಧಿಗೆ ಸಹಕಾರ ಅಗತ್ಯ

03:23 PM Jun 06, 2019 | Naveen |

ಸಿರವಾರ: ಸಮೀಪದ ನವಲಕಲ್ ಬೃಹನ್ಮಠದಲ್ಲಿ ನಿರ್ಮಿಸಿದ ಸಮುದಾಯ ಭವನದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಬುಧವಾರ ನಡೆಯಿತು.

Advertisement

ರಾಯಚೂರು ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಮುದಾಯ ಭವನಗಳಿಂದ ಬಡವರಿಗೆ ಮದುವೆ ಹಾಗೂ ಇನ್ನಿತರೆ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ. ಮಠ ಮಾನ್ಯಗಳಲ್ಲಿ ದಿನನಿತ್ಯ ವಿವಿಧ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರುತ್ತವೆ. ಇದಕ್ಕೆ ಸಮುದಾಯ ಭವನ ಅಗತ್ಯ ಇದೆ. ಮಠದ ಅಭಿವೃದ್ಧಿಗೆ ಭಕ್ತರ ಸಹಕಾರವೂ ಅಗತ್ಯ. ಈ ನಿಟ್ಟಿನಲ್ಲಿ ಈ ಕಟ್ಟಡಕ್ಕೆ ಅನುದಾನ ನೀಡಿದ ಎಂ.ಎಲ್.ಸಿ ಬೋಸರಾಜ್‌ ಅವರ ಕಾರ್ಯ ಶ್ಲಾಘನೀಯ ಎಂದರು.

ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌.ಬೋಸರಾಜ್‌ ಮಾತನಾಡಿ, ರಾಜ್ಯ ಸರ್ಕಾರವು ಬಡವರ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಂದು ಗ್ರಾಮಗಳಲ್ಲಿ ಸಮುದಾಯ ಭವನಗಳನ್ನು ನಿರ್ಮಿಸುತ್ತಿದೆ. ಮಠಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗಾಗಿ ಕೆಬಿಜೆಎನ್‌ಎಲ್ ಯೋಜನೆಯಡಿ ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ. ಜನತೆ ಇದರ ಪ್ರಯೋಜನ ಪಡೆಯಬೇಕು ಎಂದರು.

ನೀಲಗಲ್ನ ಡಾ| ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ಗಬ್ಬೂರಿನ ಬೂದಿಬಸವ ಶಿವಾಚಾರ್ಯ ಸ್ವಾಮೀಜಿ, ಕಾರ್ಜೋಹಳ್ಳಿಯ ಶ್ರೀ ಶಂಭುಲಿಂಗ ಸ್ವಾಮೀಜಿ, ದೇವಾಪುರದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ನೀಲಗಲ್ ಬೃಹನ್ಮಠದ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ವೀರಘೋಟದ ಅಡವಿಲಿಂಗ ಮಹಾರಾಜ ಸ್ವಾಮೀಜಿ, ಬಸವರಾಜಯ್ಯ ಸ್ವಾಮಿ ಬಲ್ಲಟಗಿ, ಮಾಜಿ ಶಾಸಕ ಹಂಪಯ್ಯ ನಾಯಕ, ಜಿಪಂ ಸದಸ್ಯ ಕಿರಿಲಿಂಗಪ್ಪ, ಮಲ್ಲಟ ತಾಪಂ ಸದಸ್ಯ ಮಲ್ಲಕಾರ್ಜುನ ನಾಯಕ, ಮುಖಂಡರಾದ ಆರ್‌.ಕೆ.ಚನ್ನಬಸವ, ಚುಕ್ಕಿ ಸೂಗಪ್ಪ, ಅಸ್ಲಾಂಪಾಷಾ, ಜಿ.ಲೋಕರೆಡ್ಡಿ, ದಾನನಗೌಡ, ಶರಣಯ್ಯ ಗುಡದಿನ್ನಿ, ನಿರ್ಮಲ ಬೆಣ್ಣಿ ಸೇರಿದಂತೆ ಅನೇಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next