Advertisement

Raichur: ಒಳ ಮೀಸಲಾತಿ ಜಾರಿಗಾಗಿ ಬಂದ್

01:07 PM Oct 03, 2024 | Team Udayavani |

ರಾಯಚೂರು: ಸುಪ್ರಿಂ ಕೋರ್ಟ್ ಆದೇಶದನ್ಚಯ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಮಾಡದೆ ರಾಜ್ಯ ಸರ್ಕಾರ ವಿಳಂಬ ಧೋರಣೆ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಆ.3ರ ಗುರುವಾರ ರಾಯಚೂರು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.

Advertisement

ನಗರದ ಕೇಂದ್ರ ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳನ್ನು ಮಾಲೀಕರು ಸ್ವಯಂ ಪ್ರೇರಿತವಾಗಿ  ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ನೀಡಿದರು.

ಹೈದರಾಬಾದ್ ರಸ್ತೆಯಿಂದ ರಾಯಚೂರಿಗೆ ಬರುವ ಬಸ್ ಗಳನ್ನೂ ಹೊರ‌ವಲಯದ ಬೈಪಾಸ್ ರಸ್ತೆಯ ಮೂಲಕ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ನಗರದ ಬಸವೇಶ್ವರ ವೃತ್ತದಿಂದ ಬಸ್ ನಿಲ್ದಾಣಕ್ಕೆ ತೆರಳುವ ಮಾರ್ಗ ಬದಲಿಸಲಾಗಿದೆ. ನವೋದಯ ಕಾಲೇಜು, ಬಸವೇಶ್ವರ ವೃತ್ತ, ಸಾತ್ ಮೈಲ್ ಕ್ರಾಸ್ ಹಾಗೂ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಿಗಿ‌ ಬಂದೋಬಸ್ರ್ ಮಾಡಲಾಗಿದೆ.

ಕೇಂದ್ರ ಬಸ್ ನಿಲ್ದಾಣ, ಉಸ್ಮಾನಿಯಾ ಮಾರುಕಟ್ಟೆ ಪ್ರದೇಶದ ಸುತ್ತಮುತ್ತ ಸಂಚರಿಸಿ ವಾಣಿಜ್ಯ ಮಳಿಗೆಗಳನ್ನು ಬಂದ್ ಮಾಡುವಂತೆ ಪ್ರತಿಭಟನಾಕಾರರು ಮನವಿ ಮಾಡಿದರು.

Advertisement

ಕಳೆದ 30 ವರ್ಷಗಳಿಂದ ರಾಯಚೂರು ಜಿಲ್ಲೆಯಲ್ಲಿ ಆರಂಭವಾಗಿರುವ ಒಳ ಮೀಸಲಾತಿ ಜಾರಿ ಹೋರಾಟಕ್ಕೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ಆದರೆ, ಒಳ ಮೀಸಲಾತಿ ಜಾರಿ ಮಾಡಲು ನ್ಯಾಯಾಲಯ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದ್ದು, ಇದನ್ನು ಜಾರಿ ಮಾಡುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತದೆ. ಸಿಎಂ ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವುದಾಗಿ ತಿಳಿಸಿದ್ದರು. ಆದರೆ, ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ಜಾರಿಗೆ ಮುಂದಾಗುತ್ತಿಲ್ಲ ಎಂದು ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದರು.

ಸಿರವಾರ: ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಜಾರಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಸಿರವಾರ ಬಂದ್ ಕರೆ ನೀಡಿದ್ದು ಪಟ್ಟಣ ಸಂಪೂರ್ಣ ಸ್ತಬ್ಧಗೊಂಡಿದೆ.

ಆ.3ರ ಗುರುವಾರ ಬೆಳಗ್ಗೆಯಿಂದಲೇ ಅಂಗಡಿ- ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿದ್ದು, ವಾಹನ ಸಂಚಾರ ಸಂಪೂರ್ಣ ಬಂದಾಗಿದೆ.

ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚುವುದರ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಿಪಿಐ ಶಶಿಕಾಂತ ಎಂ., ಪಿಎಸ್ಐ ಅಮರೇಗೌಡ ನೇತೃತ್ವದಲ್ಲಿ ಬಂದೋಬಸ್ತ್ ಒದಗಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next