ಶಿರಸಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಡಿಕೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮ ಸುಮಾರು ಅರ್ಧ ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದ ಅಡಿಕೆ ತೋಟ ಬೆಂಕಿಗಾಹುತಿಯಾದ ಘಟನೆ ತಾಲೂಕಿನ ಹೆಗಡೆ ಕಟ್ಟಾ ಬಾಳೇಗದ್ದೆ ಸಮೀಪದ ಕೊಟ್ಟಿಗೆಹಳ್ಳಿಯಲ್ಲಿ ನಡೆದಿದೆ.
Advertisement
ಕಲಗದ್ದೆಯ ಲಕ್ಷ್ಮೀನಾರಾಯಣ ಹೆಗಡೆ ಎಂಬುವವರಿಗೆ ಸೇರಿದ ತೋಟ ಇದಾಗಿದೆ. ಅಡಿಕೆ ತೊಟದ ನಡುವೆ ವಿದ್ಯುತ್ ತಂತಿ ಹಾದುಹೋಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಮಾರು 100 ಅಡಿಕೆ ಮರಗಳಿಗೆ ಹಾಗೂ ಅಡಿಕೆ ಸಸಿಗಳಿಗೆ ಹಾನಿಯಾಗಿದೆ.
ಇದನ್ನೂ ಓದಿ: ನಿಮ್ಮ ಆಶೀರ್ವಾದವೇ ನಮಗೆ ಶಕ್ತಿ, ಹೊಸ ಹುಮ್ಮಸ್ಸು: ದಾವಣಗೆರೆಯಲ್ಲಿ ಪ್ರಧಾನಿ ಮೋದಿ