ಶಿರಸಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ತಾಲೂಕಿನ ಕುಮಟಾ-ಶಿರಸಿ ಹೆದ್ದಾರಿಯ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ.
ಮೃತರು ಶಿರಸಿ ರಾಘವೆಂದ್ರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಮದುವೆ ಸಮಾರಂಭಕ್ಕೆ ವರನ ಕಡೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಚಾಲಕ ಚೆನ್ನೈ ಮೂಲದವನಾಗಿದ್ದಾನೆ.
ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ಕಿನ್ನಿಕಂಬಳದ ರಿಕ್ಷಾ ಚಾಲಕ ರಾಮಕೃಷ್ಣರಾವ್ ಬಾಬುರಾವ್ (71), ವಿದ್ಯಾಲಕ್ಷ್ಮಿ ಕೊಂ ರಾಮಕೃಷ್ಣರಾವ್ (67) ಪುಷ್ಪಾ ಮೋಹನ್ ರಾವ್ (62), ಇನ್ಪೋಸಿಸ್ ಇಂಜನೀಯರ್ ಸುಹಾಸ್ ಗಣೇಶ್ ರಾವ್ (30) ಚೆನ್ನೈನ ಅರವಿಂದ್ (45) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಕೂಡ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.