Advertisement

Sirsi ಪರಿಸರ ವಿವಿ; ಸಿಎಂಗೆ ಪತ್ರ ಬರೆದ ಕಾಗೇರಿ

08:21 PM Jun 16, 2023 | Team Udayavani |

ಶಿರಸಿ: ಉತ್ತರ ಕನ್ನಡದ ಶಿರಸಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಪರಿಸರ ವಿಜ್ಞಾನ ವಿಶ್ವವಿದ್ಯಾಲಯವನ್ನು ರಾಜ್ಯ ಸರಕಾರದ ಪ್ರಸಕ್ತ ಬಜೆಟ್ ಲ್ಲಿ ಮುಂದುವರೆಸುವಂತೆ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

Advertisement

ಪರಿಸರದ ಮೇಲೆ ಮಾನವ ನಿರ್ಮಿತ ಒತ್ತಡಗಳಿಂದ ಉಂಟಾದ ದುಷ್ಪರಿಣಾಮಗಳನ್ನು ಸರಿದೂಗಿಸಲು ರಾಜ್ಯದಲ್ಲಿ ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ರಾಜ್ಯದಲ್ಲಿ ಅನೇಕ ಪರಿಸರ ಪೂರಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಈ ಎಲ್ಲಾ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ನೆರವಾಗಲು ಹಾಗೂ ಸಮಗ್ರ ಪರಿಸರ ಅಭಿವೃದ್ಧಿಗೆ ಸಂಬಂಧಿಸಿದ ರೂಪುರೇಷೆಗಳನ್ನು ಸಿದ್ದಪಡಿಸಲು ಹಿಂದಿನ ಸರಕಾರದ ಅವಧಿಯಲ್ಲಿ 2023-24ನೇ ಸಾಲಿನ ಆಯವ್ಯಯ ದಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯವನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸ್ಥಾಪಿಸಲು ಘೋಷಿಸಲಾಗಿತ್ತು. ಇದು ಮಲೆನಾಡು ಭಾಗಗಳ ಪರಿಸರಾಸಕ್ತ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ಪ್ರಸ್ತಾಪಿಸಿದ್ದಾರೆ.

ಕಲುಷಿತಗೊಂಡ ವಾತಾವರಣದಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಯುವಜನತೆ ಪರಿಸರದ ಕುರಿತು ಆಸಕ್ತಿಯಿಂದ ಅಧ್ಯಯನ ನಡೆಸಲು, ರಾಜ್ಯದಲ್ಲಿ ಪರಿಸರ ವಿಜ್ಞಾನ ವಿಶ್ವವಿದ್ಯಾಲಯದ ಅತ್ಯಾಗತ್ಯತೆಯನ್ನು ಮನಗಂಡು ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯವನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸ್ಥಾಪಿಸಲು ಕುರಿತಂತೆ ನೂತನ ಸರಕಾರದಿಂದ ಮಂಡಿಸಲಿರುವ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಮುಂದುವರೆಸಿ,ಅನುದಾನ ಮೀಸಲಿರಿಸಿ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next