Advertisement

ಕೋವಿಡ್ ತಡೆಗೆ ಅಧಿಕಾರಿಗಳು ಶ್ರಮಿಸಿ

01:15 PM Apr 19, 2020 | Naveen |

ಸಿರುಗುಪ್ಪ: ನಗರದ ನಗರಸಭೆ ಸಭಾಂಗಣದಲ್ಲಿ ನಡೆದ ಕೋವಿಡ್‌-19 ಪರಿಶೀಲನಾ ಸಭೆ ಶಾಸಕ ಎಂ.ಎಸ್‌. ಸೋಮಲಿಂಗಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement

ಶಾಸಕ ಎಂ.ಎಸ್‌. ಸೋಮಲಿಂಗಪ್ಪ ಮಾತನಾಡಿ ತಾಲೂಕಿನ ಹಾಗಲೂರು ಹೊಸಳ್ಳಿ ಗ್ರಾಮದಲ್ಲಿ ಕೋವಿಡ್ ಸೋಂಕಿನ ಪಾಸಿಟಿವ್‌ ವರದಿಯಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳುವುದರಿಂದ ತಾಲೂಕಿನಲ್ಲಿ ಸೋಂಕು ಹರಡದಂತೆ ಹೆಚ್ಚಿನ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಗಡಿ ಭಾಗದ ಸೀಮಾಂಧ್ರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿದ್ದು, ಗಡಿಭಾಗದ ಕೋವಿಡ್‌-19 ಸೋಂಕಿತರು ತಾಲೂಕಿಗೆ ಬರದಂತೆ ಕ್ರಮ ಕೈಗೊಳ್ಳುವ ಅಗತ್ಯವಿದೆ. ಚೆಕ್‌ಪೋಸ್ಟ್‌ಗಳಲ್ಲಿ ಭತ್ತ ಸಾಗಣಿಕೆ ಮಾಡುವ ಲಾರಿಗಳ ಚಾಲಕರು ಮತ್ತು ಕ್ಲೀನರ್‌ಗಳನ್ನು ದ್ವಿಚಕ್ರ ವಾಹನ ಸವಾರರನ್ನು ಆರೋಗ್ಯ ಇಲಾಖೆ ಸಿಬ್ಬಂದಿ ತಪಾಸಣೆ ನಡೆಸಿ ಒಳ ಬಿಡಬೇಕು. ತಾಲೂಕಿನಲ್ಲಿ ಲಾಕ್‌ಡೌನ್‌ ವಿಧಿಸಿರುವ ಹಿನ್ನೆಲೆಯಲ್ಲಿ ಮುಖ್ಯರಸ್ತೆ, ವಾರ್ಡ್‌ಗಳಲ್ಲಿನ ಸಂಪರ್ಕ ರಸ್ತೆಗಳನ್ನು ಬ್ಯಾರಿಕೇಡ್‌ ಹಾಕಿ ಮುಚ್ಚಿ ಜನರ, ವಾಹನಗಳ ಸಂಚಾರವನ್ನು ತಡೆಯಬೇಕು.

ತಾಲೂಕಿನಲ್ಲಿ ಮಧ್ಯ ಮಾರಾಟ ನಿಷೇಧಿಸಿರುವುದರಿಂದ ಗಡಿಭಾಗದ ಸೀಮಾಂಧ್ರ ಪ್ರದೇಶದ ಗ್ರಾಮಗಳಾದ ಹೊಳಗುಂದಿ ಇತರ ಗ್ರಾಮಗಳಿಂದ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ, ಹೆಂಡ, ಮದ್ಯವನ್ನು ತಂದು ತಾಲೂಕಿನ ತೆಕ್ಕಲಕೋಟೆ, ಹಚ್ಚೋಳಿ ಸೇರಿದಂತೆ ವಿವಿಧ ಕಡೆಗಳಲ್ಲಿ ಮಾರಾಟ ಮಾಡುತ್ತಿದ್ದು ಜನರ ಆರೋಗ್ಯದ ಮೇಲೆ ದುಷ್ಟರಿಣಾಮ ಬೀರುತ್ತಿದೆ. ಆದ್ದರಿಂದ ಅಕ್ರಮ ಮದ್ಯ ಮಾರಾಟ ಮಾಡುವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು

Advertisement

Udayavani is now on Telegram. Click here to join our channel and stay updated with the latest news.

Next