Advertisement

ಅಕಾಲಿಕ ಮಳೆಗೆ ಹಾನಿ: ಗದ್ದೆ ಪರಿಶೀಲಿಸಿದ ಡಿಸಿ

04:30 PM Apr 22, 2020 | Naveen |

ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆ, ನಡಿವಿ, ನಿಟ್ಟೂರು, ಹೆರಕಲ್ಲು, ಮಾಳಾಪುರ, ಮುದ್ದಟನೂರು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಸುರಿದ ಆಲಿಕಲ್ಲು ಮಳೆಯಿಂದ ಹಾನಿಗೀಡಾದ ಭತ್ತದ ಗದ್ದೆಗಳಿಗೆ ಸಂಸದ ಕರಡಿ ಸಂಗಣ್ಣ, ಶಾಸಕ ಎಂ.ಎಸ್‌. ಸೋಮಲಿಂಗಪ್ಪ, ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರಿಂದ ಮಾಹಿತಿ ಪಡೆದರು.

Advertisement

ಮುದ್ದಟನೂರು ಗ್ರಾಮದಲ್ಲಿ ಆಲಿಕಲ್ಲು ಮಳೆಯಿಂದ ಹಾನಿಗೊಳಗಾದ ಭತ್ತದ ಗದ್ದೆಯನ್ನು ಪರಿಶೀಲಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ತಾಲೂಕಿನಲ್ಲಿ ಸೋಮವಾರ ಸುರಿದ ಮಳೆಯಿಂದಾಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬೆಳೆದಿರುವ ಭತ್ತದ ಪೈರು ಹಾಗೂ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿ ನಷ್ಟ ಉಂಟಾಗಿದ್ದು, ಕೋವಿಡ್‌-19 ಕರ್ತವ್ಯಕ್ಕೆ ನಿಯೋಜಿಸಿರುವ ಕೃಷಿ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ರಾಷೀóಯ ಪ್ರಕೃತಿ ವಿಕೋಪ ನಿಧಿಯಡಿಯಲ್ಲಿನ ಸೂಚನೆಗಳಂತೆ ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿ ರೈತರಿಗೆ ಶೀಘ್ರವಾಗಿ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಂಸದ ಕರಡಿ ಸಂಗಣ್ಣ, ಶಾಸಕ ಎಂ.ಎಸ್‌. ಸೋಮಲಿಂಗಪ್ಪ, ಸಹಾಯಕ ಆಯುಕ್ತ ರಮೇಶ್‌ ಕೋನಾರೆಡ್ಡಿ, ಜಿಲ್ಲಾ ಉಪಕೃಷಿ ನಿರ್ದೇಶಕ ಚಂದ್ರಶೇಖರ, ತಹಶೀಲ್ದಾರ್‌ ಎಸ್‌.ಬಿ. ಕೂಡಲಗಿ, ತಾಲೂಕು ಸಹಾಯಕ ಕೃಷಿ ನಿರ್ದೇಶಕ ನಜೀರ್‌ಅಹಮ್ಮದ್‌, ಗ್ರೇಡ್‌-2 ತಹಶೀಲ್ದಾರ್‌ ವಿಶ್ವನಾಥ, ಮುಖಂಡ ಎಂ.ಎಸ್‌. ವೆಂಕಟಪ್ಪನಾಯಕ ಮತ್ತು ರೈತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next