ಸಿರುಗುಪ್ಪ: ನಗರದಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ಧೇಶದಿಂದ ನಿರ್ಮಿಸಲಾಗಿರುವ ಘಟಕಗಳು ನಿರ್ವಹಣೆ ಇಲ್ಲದೆ ಹಾಳಾಗಿವೆ. ನಗರದ 31 ವಾರ್ಡ್‌ಗಳ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಐದಾರು ವಾರ್ಡ್‌ಗಳಿಗೆ ಒಂದೊಂದರಂತೆ ಒಟ್ಟು 6 ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗಿದೆ. ಆದರೆ ಅವುಗಳಲ್ಲಿ ಒಂದು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, 5 ಘಟಕಗಳು ಸ್ಥಗಿತಗೊಂಡಿವೆ.
Advertisement
ಘಟಕಗಳಿಗೆ ನೀರು ಪೂರೈಕೆ ಮಾಡಲೆಂದು ಹಾಕಲಾಗಿದ್ದ ಬೋರ್‌ವೆಲ್‌ಗಳಲ್ಲಿಯೇ ಸಂಪೂರ್ಣವಾಗಿ ನೀರು ಬತ್ತಿ ಹೋಗಿದ್ದು,ಇದೇ ಘಟಕಗಳ ಸ್ಥಗಿತಕ್ಕೆ ಮುಖ್ಯ ಕಾರಣವೆಂದು ಅಧಿಕಾರಿಗಳು ತಿಳಿಸಿದ್ದಾರೆ. ಕಡಿಮೆ ದರದಲ್ಲಿ ಸ್ಥಳಿಯವಾಗಿಯೇ ಶುದ್ಧ ಕುಡಿಯುವ ನೀರೊದಗಿಸುವ ಉದ್ದೇಶದಿಂದ ನಿರ್ಮಾಣವಾದ ಐದು ಘಟಕಗಳು ಸ್ಥಗಿತಗೊಂಡಿದ್ದು, ನಗರದ ನೀಲಕಂಠೇಶ್ವರ ದೇವಸ್ಥಾನದ ಹತ್ತಿರ ಇರುವ ಸರ್ಕಾರಿ ಶುದ್ಧ ಕುಡಿಯುವ ನೀರಿನ ಒಂದು ಘಟಕ ಮಾತ್ರ ಕಾರ್ಯನಿರ್ವಹಿಸುತ್ತಿದೆ.
ಇರುವ 6 ಶುದ್ಧ ನೀರಿನ ಘಟಕಗಳಲ್ಲಿ 5 ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಗಮನಕ್ಕಿದೆ. ಆದರೆ, ಸಾರ್ವಜನಿಕರಿಂದ ಯಾವುದೇ ದೂರು ಬಂದಿಲ್ಲ ಎಂಬ ಒಂದೇ ಕಾರಣಕ್ಕೆ ಇಲಾಖೆ ಅಧಿಕಾರಿಗಳು ಸ್ಥಗಿತಕೊಂಡ ಘಟಕಗಳ ದುರಸ್ತಿ ಕುರಿತು ತಲೆಕೆಡಿಸಿಕೊಂಡಿಲ್ಲ ಎಂಬುದು ಆಶ್ಚರ್ಯವಾದರೂ ಸತ್ಯ.
Related Articles
ಗಂಗಾಧರಗೌಡ, ಎಇಇ ನಗರಸಭೆ
Advertisement
ಈ ಹಿಂದೆ ನಗರದಲ್ಲಿ ಸರ್ಕಾರದಿಂದ 6 ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗಿದೆ. ಇವುಗಳಲ್ಲಿ 5 ಘಟಕಗಳುಕಾರ್ಯನಿರ್ವಹಿಸುತ್ತಿಲ್ಲ, ಈ ಬಗ್ಗೆ ಸಾರ್ವಜನಿಕರಿಂದ ಯಾವುದೇ ದೂರು ನಮ್ಮ ಇಲಾಖೆಗೆ ಬಂದಿಲ್ಲ, ದೂರು ನೀಡಿದರೆ
ಪರಿಶೀಲಿಸಲಾಗುವುದು.
ರವೀಂದ್ರ ನಾಯ್ಕ, ಎಇಇ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ *ಆರ್.ಬಸವರೆಡ್ಡಿ ಕರೂರು