Advertisement

ವಲಸೆ ತಡೆಗೆ ನರೇಗಾದಡಿ ಉದ್ಯೋಗ

07:03 PM May 23, 2020 | Naveen |

ಸಿರುಗುಪ್ಪ: ಗ್ರಾಮಾಂತರ ಪ್ರದೇಶದಲ್ಲಿ ಕೃಷಿ ಮತ್ತು ಕೂಲಿಕಾರ್ಮಿಕರಿಗೆ ಉದ್ಯೋಗ ದೊರಕಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಲಾಭವನ್ನು ರೈತರು ಮತ್ತು ಕೃಷಿಕರು ಪಡೆದುಕೊಳ್ಳಬೇಕೆಂದು ರಾಜ್ಯ ನರೇಗಾ ಯೋಜನೆಯ ಯೋಜನಾ ವ್ಯವಸ್ಥಾಪಕ ರೋಹಿತ್‌ ತಿಳಿಸಿದರು.

Advertisement

ತಾಲೂಕಿನ ಬಿ.ಎಂ. ಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನಾಡಂಗ ಗ್ರಾಮದಲ್ಲಿ ಕೃಷಿಹೊಂಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಹಳ್ಳಿಗಳಲ್ಲಿ ಉದ್ಯೋಗವಿಲ್ಲದೆ ಕೃಷಿ ಕೂಲಿಕಾರರು ಮಹಾನಗರಗಳಿಗೆ ಉದ್ಯೋಗ ಅರಸಿ ವಲಸೆ ಹೋಗುವುದನ್ನು ತಡೆಯುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ನರೇಗಾ ಯೋಜನೆಯಡಿ ಉದ್ಯೋಗವನ್ನು ಸೃಷ್ಟಿಸಿ ಕಾರ್ಮಿಕರಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ. ಅರ್ಹ ರೈತರು ನರೇಗಾ ಯೋಜನೆಯಲ್ಲಿ ತಮ್ಮ ಹೊಲಗಳ ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣಕ್ಕೆ ಅನುವು ಮಾಡಿಕೊಡಲಾಗಿದೆ. ಹೊಲಗಳಲ್ಲಿ ರೈತರು ಕೃಷಿ ಹೊಂಡ ನಿರ್ಮಿಸುವುದರಿಂದ ‌ ಮಳೆಗಾಲದ ನಂತರ ತಮ್ಮ ಬೆಳೆಗಳಿಗೆ ನೀರು ಹರಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಕೃಷಿ ಜಂಟಿ ಉಪನಿರ್ದೇಶಕ ಚಂದ್ರಶೇಖರ್‌, ಸಹಾಯಕ ಕೃಷಿ ನಿರ್ದೇಶಕ ನಜೀರ್‌ ಅಹಮ್ಮದ್‌, ನರೇಗಾ ತಾಲೂಕು ನಿರ್ದೇಶಕಿ ಕೆ.ವಿ. ನಿರ್ಮಲಾ, ತಾಲೂಕು ಸಂಯೋಜಕ ರಮೇಶ್‌, ತಾಂತ್ರಿಕ ಅಧಿಕಾರಿ ಪ್ರದೀಪ್‌, ಗ್ರಾಪಂ ಪಿಡಿಒ ಹನುಮನಗೌಡ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next