Advertisement

ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ಆಗ್ರಹ

05:54 PM Apr 17, 2020 | Naveen |

ಸಿರುಗುಪ್ಪ: ರಾಜ್ಯದಲ್ಲಿ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕು ಸಮಿತಿ ಪದಾಧಿಕಾರಿಗಳು ಪಿಡಿಒ ಆದೆಪ್ಪರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Advertisement

ಮುಖಂಡ ಆಲಂಬಾಷ ಮಾತನಾಡಿ, ರಾಜ್ಯ ಸರ್ಕಾರವು ದೆಹಲಿ ಸರ್ಕಾರದ ಮಾದರಿಯಲ್ಲಿ ಲಾಕ್‌ಡೌನ್‌ ಮುಗಿಯುವವರೆಗೂ ಅಸಂಘಟಿತ ಕಾರ್ಮಿಕರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ, ಸಾರ್ವಜನಿಕರ ಶೂನ್ಯ ಖಾತೆ, ಉದ್ಯೋಗ ಖಾತ್ರಿ ಸೇರಿದಂತೆ ಉಳಿತಾಯ ಖಾತೆಗಳಿಗೆ ಮಾಸಿಕ 6 ಸಾವಿರ ರೂ. ಜಮೆ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾನವ ಕೆಲಸದ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಬೇಕು. ಒಂದು ದಿನದ ಕೂಲಿಯನ್ನು 600 ರೂ.ಗೆ ಹೆಚ್ಚಿಸಬೇಕು. ಗ್ರಾಮದ ರಸ್ತೆ ಹಾಗೂ ಚರಂಡಿಗಳನ್ನು ನಿಯಮಿತವಾಗಿ ಸ್ವತ್ಛಗೊಳಿಸಬೇಕು ಎಂದು ಒತ್ತಾಯಿಸಿದರು.

ಪದಾಧಿಕಾರಿಗಳಾದ ಶೇಕಣ್ಣ, ಬಸಪ್ಪ, ವಿರೇಶ, ಮಲ್ಲಯ್ಯ, ಮಾರೇಶ, ರಾಮರಾಜು, ದಾಸಪ್ಪ, ಪಕ್ಕೀರಪ್ಪ, ನಿಜಲಿಂಗಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next