Advertisement
ಇನ್ನೂ ನದಿ ತೀರದ ಗ್ರಾಮಗಳಲ್ಲಿ ಟ್ರ್ಯಾಕ್ಟರ್ ಹೊಂದಿರುವ ಮಾಲೀಕರು ಮತ್ತು ರಾಜಕೀಯ ಪ್ರಭಾವಿಗಳು ತಮ್ಮ ಟ್ರ್ಯಾಕ್ಟರ್‌ಗಳ ಮೂಲಕ ಮರಳು ಸಾಗಾಣಿಕೆಯನ್ನೇ ಉದ್ಯೋಗವನ್ನಾಗಿ ಮಾಡಿಕೊಂಡಿದ್ದಾರೆ. ನದಿ ದಂಡೆಯಲ್ಲಿರುವ ಹೊಲಗಳ ಮಾಲೀಕರ ಮರಳು ಅಕ್ರಮ ಸಾಗಾಣಿಕೆಗೆ ಸಹಕರಿಸುತ್ತಿದ್ದಾರೆ. ಅಲ್ಲದೆ ಅತಿಯಾದ ವಾಹನಗಳ ಓಡಾಟದಿಂದ ರಸ್ತೆಗಳು ಹಾಳಾಗಿದ್ದು, ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗಿದೆ.
Related Articles
Advertisement
ತಾಲೂಕಿನ ಉಡೇಗೋಳು ಮತ್ತು ನಿಟ್ಟೂರಿನಲ್ಲಿ ಅಧಿಕೃತ ಮರಳು ಸ್ಟಾಕ್ ಯಾರ್ಡ್‌ಗಳನ್ನು ತೆರೆಯಲಾಗಿದೆ. ಆದರೆ ರಾರಾವಿ, ಉತ್ತನೂರು, ಮಾಟಸೂಗೂರು, ತಾಳೂರು, ಕೂರಿಗನೂರು, ಬಲಕುಂದಿ ಗ್ರಾಮಗಳ ಹತ್ತಿರ ಹರಿಯುವ ವೇದಾವತಿ ಹಗರಿ ನದಿಯಿಂದ ಅನಧಿಕೃತವಾಗಿ ಮರಳು ಸಾಗಿಸಲಾಗುತ್ತಿದೆ. ರಾತ್ರಿ ಮತ್ತು ಬೆಳಗಿನ ಜಾವದಲ್ಲಿಯೇ ಸಾಗಾಣಿಕೆ ಹೆಚ್ಚಾಗಿ ನಡೆಯುತ್ತಿದೆ.
ಇನ್ನೂ ನದಿ ತೀರದ ಗ್ರಾಮಗಳಲ್ಲಿ ಟ್ರ್ಯಾಕ್ಟರ್ ಹೊಂದಿರುವ ಮಾಲೀಕರು ಮತ್ತು ರಾಜಕೀಯ ಪ್ರಭಾವಿಗಳು ತಮ್ಮ ಟ್ರ್ಯಾಕ್ಟರ್‌ಗಳ ಮೂಲಕ ಮರಳು ಸಾಗಾಣಿಕೆಯನ್ನೇ ಉದ್ಯೋಗವನ್ನಾಗಿ ಮಾಡಿಕೊಂಡಿದ್ದಾರೆ. ನದಿ ದಂಡೆಯಲ್ಲಿರುವ ಹೊಲಗಳ ಮಾಲೀಕರ ಮರಳು ಅಕ್ರಮ ಸಾಗಾಣಿಕೆಗೆ ಸಹಕರಿಸುತ್ತಿದ್ದಾರೆ. ಅಲ್ಲದೆ ಅತಿಯಾದ ವಾಹನಗಳ ಓಡಾಟದಿಂದ ರಸ್ತೆಗಳು ಹಾಳಾಗಿದ್ದು, ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗಿದೆ.
ಗಣಿ ಮತ್ತು ಭೂ ವಿಜ್ಞಾನಿ ಇಲಾಖೆ, ತಹಶೀಲ್ದಾರರು, ತಾಪಂ ಇಒ ಪೊಲೀಸ್ ಇಲಾಖೆ ಸೇರಿದಂತೆ ಒಟ್ಟು 13 ಇಲಾಖೆಗಳಿಗೆ ಅಕ್ರಮ ಮರಳು ಸಾಗಾಣಿಕೆ ತಡೆಯುವ ಅಧಿಕಾರ ನೀಡಲಾಗಿದೆ. ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕಾದ ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಅಕ್ರಮ ಮರಳು ಸಾಗಾಣಿಕೆ ಬಗ್ಗೆ ದೂರು ನೀಡಿದರೆ ಸರಿಯಾದ ಸಮಯಕ್ಕೆ ಅಧಿಕಾರಿಗಳು ಬರುವುದಿಲ್ಲ ಎನ್ನುವ ಆರೋಪ ಸಾರ್ವಜನಿಕರಿಂದ ಕೇಳಿಬಂದಿವೆ.
ಮರಳು ಅಕ್ರಮ ಸಾಗಾಟ ತಡೆಗೆ ಎಷ್ಟೇ ಕಠಿಣ ನಿಯಮ ಜಾರಿಗೊಳಿಸುತ್ತಿದ್ದರೂ ಅಕ್ರಮ ದಂಧೆ ನಿಲ್ಲುತ್ತಿಲ್ಲ. ಅಕ್ರಮ ಮರಳು ದಂಧೆಕೋರರಿಗೆ ರಾಜಕಿಯ ಪಕ್ಷಗಳ ಪ್ರಭಾವಿ ನಾಯಕರ ಬೆಂಬಲವಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇನ್ನೂ ಮನೆ ನಿರ್ಮಿಸಿಕೊಳ್ಳುವ ಬಡವರಿಗೆ ಮರಳು ಸಿಗುತ್ತಿಲ್ಲ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತಾಲೂಕಿನಲ್ಲಿ ಇನ್ನಾದರೂ ಮರಳು ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಿ ಜನ ಸಾಮಾನ್ಯರ ಕೈಗೆ ಸಿಗುವ ದರದಲ್ಲಿ ಮರಳು ಸಿಗುವಂತೆ ಮಾಡಬೇಕಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಗ್ನರಾಗಿದ್ದು, ಅಕ್ರಮವಾಗಿ ಮರಳು ಸಾಗಾಟ ಮಾಡುವುದನ್ನು ನಿರ್ಬಂಧಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಟ್ರ್ಯಾಕ್ಟರ್ ಮತ್ತು ಎತ್ತಿನ ಬಂಡಿಗಳಲ್ಲಿ ಅಕ್ರಮವಾಗಿ ಯಾರೇ ಮರಳು ಸಾಗಾಟ ಮಾಡಿದರೆ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಅಕ್ರಮ ಮರಳು ಸಾಗಾಣಿಕೆ ತಡೆಯಲು ಅಧಿಕಾರಿಗಳ ತಂಡವು ರಾತ್ರಿ ಹೊತ್ತು ಗಸ್ತು ತಿರುಗಲಿದೆ.
ಎತ್ತಿನ ಬಂಡಿಗಳಲ್ಲಿ ಮರಳು ಸಾಗಾಟ ಮಾಡಿದವರ ವಿರುದ್ಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಎತ್ತಿನ ಬಂಡಿ ಮಾಲೀಕರಿಗೆ 2 ಸಾವಿರ ರೂ. ದಂಡ ವಿಧಿಸಿ ಮರಳು ಸಾಗಾಟ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಅಕ್ರಮವಾಗಿ ಮರಳು ಸಾಗಾಟ ಮಾಡುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು.•ದಯಾನಂದ್ ಪಾಟೀಲ, ತಹಶೀಲ್ದಾರ್.