Advertisement

ಬಿತ್ತನೆ ಬೀಜಗಳ ಕೊರತೆಯಿಲ್ಲ: ಮಲ್ಲಿಕಾರ್ಜುನ

12:33 PM Jun 05, 2020 | Naveen |

ಸಿರುಗುಪ್ಪ: ಜಿಲ್ಲೆಯ 39 ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಬೇಕಾದ ಬೀಜಗಳನ್ನು ಸಂಗ್ರಹಿಸಿಡಲಾಗಿದೆ ಎಂದು ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ತಿಳಿಸಿದರು.

Advertisement

ನಗರದ ಎ.ಡಿ.ಎ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂಗಾರು ಹಂಗಾಮಿನ ಮಳೆ ಆರಂಭವಾಗಿದ್ದು, ಜಿಲ್ಲೆಯ ಪೂರ್ವ ತಾಲೂಕುಗಳಲ್ಲಿ ಶೇಂಗಾ, ಜೋಳ ಬಿತ್ತನೆ ಕಾರ್ಯ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಒಟ್ಟು 4 ಲಕ್ಷ 35ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯ ಗುರಿ ಹೊಂದಲಾಗಿದ್ದು, ಹಡಗಲಿ, ಹರಪನಹಳ್ಳಿ, ಕೂಡ್ಲಿಗಿ ತಾಲೂಕುಗಳಲ್ಲಿ ಶೇಂಗಾ, ಜೋಳ ಬಿತ್ತನೆ ಕಾರ್ಯ ಪ್ರಾರಂಭವಾಗಿದೆ, ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಭತ್ತ, ರಾಗಿ, ಜೋಳ, ನೆಲಗಡಲೆ, ಹೆಸರು, ಅಲಸಂದಿ, ನವಣೆ, ತೊಗರಿ ಮುಂತಾದ ಬೀಜಗಳ 17 ಸಾವಿರದ 8 ನೂರು ಕ್ವಿಂಟಲ್‌ ದಾಸ್ತಾನು ಮಾಡಿಡಲಾಗಿದೆ.

ಜಿಲ್ಲೆಯಲ್ಲಿ ನಮ್ಮ ಇಲಾಖೆ ವತಿಯಿಂದ ಕೃಷಿ ಹೊಂಡ, ಬದು ನಿರ್ಮಾಣ ಮಾಡಲಾಗಿದ್ದು, 3,12,900 ಮಾನವ ದಿನಗಳನ್ನು ಸೃಜಿಸಲಾಗಿದ್ದು, ರಾಜ್ಯದಲ್ಲಿ ಜಿಲ್ಲೆಯು ಪ್ರಥಮ ಸ್ಥಾನದಲ್ಲಿದೆ. ಸಿರುಗುಪ್ಪ ದ್ವಿತೀಯ ಸ್ಥಾನದಲ್ಲಿದೆ. ರಾಜ್ಯದಲ್ಲಿಯೇ ನಮ್ಮ ಜಿಲ್ಲೆಯ ಕೃಷಿ ಹೊಂಡಗಳು ಮಾದರಿಯಾಗಿವೆ ಎಂದು ಹೇಳಿದರು. ಜಿಲ್ಲಾ ಜಂಟಿ ಕೃಷಿ ಉಪನಿರ್ದೇಶಕ ಚಂದ್ರಶೇಖರ್‌, ಸಹಾಯಕ ಕೃಷಿ ನಿರ್ದೇಶಕ ನಜೀರ್‌ ಅಹಮ್ಮದ್‌, ಕೃಷಿ ಅಧಿಕಾರಿ ಗರ್ಜೆಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next