ಸಿರುಗುಪ್ಪ: ತಾಲೂಕಿನ ಅಗಸನೂರು ಗ್ರಾಮದಲ್ಲಿರುವ 2ನೇ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛ ಭಾರತ್ ಅಭಿಯಾನ ಯೋಜನೆಯಡಿಯಲ್ಲಿ ರೂ. 40ಸಾವಿರ ವೆಚ್ಚದಲ್ಲಿ ನಿರ್ಮಾಣವಾಗಿರುವ ಶೌಚಾಲಯದ ಗುಂಡಿಯನ್ನು ಮುಚ್ಚದೆ ಬಿಟ್ಟಿರುವುದು ಅಂಗನವಾಡಿಗೆ ಬರುವ ಮಕ್ಕಳಿಗೆ ಕಂಟಕವಾಗಿ ಪರಿಣಮಿಸಿದೆ.
ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಶೌಚಾಲಯ ಹೊಂದಬೇಕು ಎನ್ನುವ ಉದ್ದೇಶದಿಂದ ಸರ್ಕಾರವು ಸ್ವತ್ಛಭಾರತ್ ಅಭಿಯಾನ ಯೋಜನೆಯಡಿ ಈ ಅಂಗನವಾಡಿ ಕೇಂದ್ರದ ಪಕ್ಕದಲ್ಲಿಯೇ ಶೌಚಾಲಯವನ್ನು ನಿರ್ಮಾಣ ಮಾಡಿದೆ. ಆದರೆ ಶೌಚಾಲಯಕ್ಕೆ ಗುಂಡಿಯನ್ನು ತೆಗೆದು ಹಾಗೆ ಬಿಟ್ಟಿರುವುದರಿಂದ ಅಂಗನವಾಡಿ ಮಕ್ಕಳು ಇಲ್ಲಿ ನಿತ್ಯವೂ ಓಡಾಡುವುದರಿಂದ ಈ ಗುಂಡಿಯು ಮಕ್ಕಳ ಪಾಲಿಗೆ ಅಪಾಯ ತರಲಿದೆ.
ಅಂಗನವಾಡಿ ಸುತ್ತಮುತ್ತಲಿನ ಪರಿಸರವನ್ನು ಸ್ವತ್ಛವಾಗಿಟ್ಟುಕೊಳ್ಳಬೇಕು. ಮಕ್ಕಳು ಕಡ್ಡಾಯವಾಗಿ ಶೌಚಾಲಯವನ್ನು ಬಳಕೆ ಮಾಡಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಈ ಅಂಗನವಾಡಿ ಕೇಂದ್ರದಲ್ಲಿ ಶೌಚಾಲಯವನ್ನು ನಿರ್ಮಾಣ ಮಾಡಿದೆ. ಆದರೆ ಶೌಚಾಲಯದ ಬಳಕೆ ಮಾಡಿಕೊಳ್ಳಬೇಕಾದ ಅಂಗನವಾಡಿ ಸಿಬ್ಬಂದಿ ನಿರ್ಲಕ್ಷéದಿಂದ ಶೌಚಾಲಯದ ಗುಂಡಿಯನ್ನು ಮುಚ್ಚದೆ ಹಾಗೆಯೇ ಬಿಟ್ಟಿರುವುದರಿಂದ ಅಂಗನವಾಡಿಗೆ ಬರುವ ಮಕ್ಕಳು ಎಲ್ಲೆಂದರಲ್ಲಿ ಶೌಚ ಕಾರ್ಯವನ್ನು ಮಾಡುವುದು ಸಾಮಾನ್ಯವಾಗಿದೆ. ಇಲ್ಲಿ ಶೌಚಾಲಯ ಕಟ್ಟಿದ್ದರೂ ಇಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಯಾಗಲಿ ಅಥವಾ ಮಕ್ಕಳಿಗಾಗಲಿ ಯಾವುದೇ ರೀತಿಯಲ್ಲಿ ಉಪಯೋಗವಾಗುತ್ತಿಲ್ಲ.
ಶೌಚಾಲಯದ ಗುಂಡಿಯಲ್ಲಿ ಕಸಕಡ್ಡಿ ಹಾಕಲಾಗುತ್ತಿದೆ. ಆಯತಪ್ಪಿ ಮಕ್ಕಳು ಈ ಗುಂಡಿಗೆ ಬಿದ್ದರೆ ಮಕ್ಕಳ ಜೀವಕ್ಕೆ ಅಪಾಯ ತರಲಿದೆ. ಆದರೂ ಸಂಬಂಧಿಸಿದ ಅಧಿಕಾರಿಗಳು ಗುಂಡಿಯನ್ನು ಮುಚ್ಚಿಸದೇ ನಿರ್ಲಕ್ಷ್ಯ ತೋರಿಸುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ.
ಪರಿಸರವನ್ನು ಮಲೀನ ಮಾಡದೆ ಸ್ವಚ್ಛವಾಗಿಟ್ಟುಕೊಳ್ಳಬೇಕು ಎನ್ನುವ ಉದ್ದೇಶದಿಂದ ಅಂಗನವಾಡಿ ಕೇಂದ್ರದಲ್ಲಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಆದರೆ ಶೌಚಾಲಯದ ಗುಂಡಿಯನ್ನು ಮುಚ್ಚದೆ ಇರುವುದರಿಂದ ಮಕ್ಕಳಿಗೆ ಅಪಾಯವಾಗಲಿದೆ. ಆದ್ದರಿಂದ ಶೌಚಾಲಯ ಗುಂಡಿ ಮುಚ್ಚಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು.
ಹುಸೇನಿ, ಗ್ರಾಮಸ್ಥ
ಅಗಸನೂರು ಅಂಗನವಾಡಿ ಕೇಂದ್ರದಲ್ಲಿ ಸ್ವತ್ಛಭಾರತ್ ಅಭಿಯಾನ ಯೋಜನೆಯಡಿಯಲ್ಲಿ ನಿರ್ಮಿಸಿರುವ ಶೌಚಾಲಯದ ಗುಂಡಿಯನ್ನು ಮುಚ್ಚದಿರುವ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಬಂದಿದ್ದು, ತಕ್ಷಣವೇ ಗುಂಡಿಯನ್ನು ಮುಚ್ಚಿಸಲು ಕ್ರಮ ತೆಗೆದುಕೊಳ್ಳಲಾಗುವುದು.
ರಾಮಕೃಷ್ಣನಾಯಕ, ಸಿಡಿಪಿಒ