Advertisement

Siruguppa ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನ ವಶ; ಚಾಲಕ ಪರಾರಿ

10:12 PM Jul 09, 2024 | |

ಸಿರುಗುಪ್ಪ: ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಿನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ತೆಕ್ಕಲಕೋಟೆ ಪೊಲೀಸರು ದಾಳಿ ಮಾಡಿ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡ ಘಟನೆ ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಖಚಿತ ಮಾಹಿತಿ ಮೇರೆಗೆ ತೆಕ್ಕಲಕೋಟೆ ಪೊಲೀಸ್ ಠಾಣೆಯ ಪಿ ಎಸ್ ಐ ಶಾಂತಮೂರ್ತಿ ನೇತೃತ್ವದ ತಂಡ ದಾಳಿ ನಡೆಸಿ 45 ಸಾವಿರ.ರೂ. ಮೌಲ್ಯದ 40 ಚೀಲದಲ್ಲಿದ್ದ 15 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಒಯ್ಯುತ್ತಿದ್ದ ಆಶೋಕ್ ಲೇಲ್ಯಾಂಡ್ ಆಟೋವನ್ನು ದೇವಿನಗರದ ರಾಷ್ಟ್ರೀಯ ಹೆದ್ದಾರಿ ಬಳಿ ಪೊಲೀಸರು ಅಡ್ಡಗಟ್ಟಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಕ್ಕಿಯನ್ನು ಮತ್ತು ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ವಾಹನ ಚಾಲಕ ಪರಾರಿಯಾಗಿದ್ದಾನೆ. ಈ ಬಗ್ಗೆ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂದರ್ಭದಲ್ಲಿ ಸಿರುಗುಪ್ಪ ಆಹಾರ ನಿರೀಕ್ಷಕ ಮಹಾರುದ್ರಗೌಡ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next