ಹೊಸದಿಲ್ಲಿ: ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಆರೋಪ ಎದುರಿಸುತ್ತಿರುವ ದಿಲ್ಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.
Advertisement
ನ್ಯಾ| ದಿನೇಶ್ ಕುಮಾರ್ ಶರ್ಮಾ ನೇತೃತ್ವದ ನ್ಯಾಯಪೀಠ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಸಿಸೋಡಿಯಾ ವಿರುದ್ಧದ ಆರೋಪಗಳು ಗಂಭೀರವಾದದ್ದು. ಉಪಮುಖ್ಯಮಂತ್ರಿ ಸ್ಥಾನದ ಜತೆಗೆ 18 ಖಾತೆಗಳನ್ನು ನಿರ್ವಹಿಸುತ್ತಿದ್ದ ಪ್ರಭಾವಿ ವ್ಯಕ್ತಿ. ಅವರಿಗೆ ಜಾಮೀನು ನೀಡಿದರೆ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ ಎನ್ನುವ ಅಂಶಗಳನ್ನು ಅವಗಣಿಸಲು ಸಾಧ್ಯವಿಲ್ಲ. ಹೀಗಾಗಿ ಜಾಮೀನು ಅರ್ಜಿ ವಜಾಗೊಳಿಸುತ್ತಿದ್ದೇವೆ ಎಂದು ಹೇಳಿತು.