ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯ ಅವರ ನ್ಯಾಯಾಂಗ ಬಂಧನವನ್ನು ಮೇ 12ರವರೆಗೆ ವಿಸ್ತರಿಸಲಾಗಿದೆ. ಪ್ರಕರಣದಲ್ಲಿ ಸಿಸೋಡಿಯ ಅವರ ವಿಚಾರಣೆ ಪೂರ್ಣಗೊಂಡಿದೆಯಾದರೂ, ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿರುವುದರಿಂದ ಸಿಸೋಡಿಯರನ್ನು ವಶಕ್ಕೆ ನೀಡುವಂತೆ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ದೆಹಲಿ ಕೋರ್ಟ್‌ಗೆ ಮನವಿ ಮಾಡಿದೆ.
ಈ ಹಿನ್ನೆಲೆ ಸಿಸೋಡಿಯ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಇದೇ ವೇಳೆ ಪ್ರಕರಣದಲ್ಲಿ ಸಿಸೋಡಿಯ ವಿರುದ್ಧ ಸಿಬಿಐ ಸಲ್ಲಿಸಿರುವ ಆರೋಪಪಟ್ಟಿಯ ಒಂದು ಪ್ರತಿಯನ್ನು ಸಿಸೋಡಿಯ ಅವರಿಗೂ ನೀಡುವಂತೆ ಸೂಚನೆ ನೀಡಿದೆ. ಸಿಬಿಐ ತನ್ನ ಪೂರಕ ಆರೋಪಪಟ್ಟಿಯಲ್ಲಿ ಸಿಸೋಡಿಯ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಹಾಗೂ ಭಾರತೀಯ ದಂಡಸಂಹಿತೆಯ ವಿವಿಧ ಕಾಯ್ದೆಗಳ ಅನ್ವಯ ಆರೋಪ ರೂಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.