Advertisement
ಹೊಳೇನರಸೀಪುರ ಠಾಣೆಯಲ್ಲಿ ದಾಖಲಾ ಗಿದ್ದ ಪ್ರಕರಣಗಳ ಕಡತಗಳು ಎಸ್‌ಐಟಿಗೆ ಹಸ್ತಾಂತರ ವಾಗಿದ್ದು, ಇದರ ಬೆನ್ನಲ್ಲೇ ಸೋಮ ವಾರ ದೂರುದಾರೇ ಸೇರಿ ಇಬ್ಬರು ಸಂತ್ರಸ್ತೆಯ ರನ್ನು ಸಿಐಡಿ ಕಚೇರಿಗೆ ಕರೆಸಿಕೊಂಡು ಹೇಳಿಕೆ ದಾಖಲಿಸಿ ಕೊಳ್ಳಲಾಗಿದೆ. ಸಂತ್ರಸ್ತೆಯರನ್ನು ಮೈಸೂರು ಎಸ್ಪಿ ಸೀಮಾ ಲಾಟ್ಕರ್ ವಿಚಾರಣೆ ನಡೆಸಿದ್ದಾರೆ.
ವೀಡಿಯೋ ಸಂಬಂಧ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಇಬ್ಬರು ಮಹಿಳಾ ಐಪಿಎಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಪ್ರಭಾವತಿ ಸಹಿತ ಮೂವರು ಮಹಿಳಾ ಡಿವೈಎಸ್ಪಿ, ಮೂವರು ಇನ್‌ಸ್ಪೆಕ್ಟರ್, ನಾಲ್ವರು ಪಿಎಸ್‌ಐ, ಸಿಐಡಿ ಸೈಬರ್ ತಂಡ ಸಹಿತ 25ಕ್ಕೂ ಹೆಚ್ಚು ಅಧಿಕಾರಿ-ಸಿಬಂದಿ ಕಾರ್ಯನಿರ್ವಹಿಸಲಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳು ವೈರಲ್ ಆಗಿವೆ. ಅವುಗಳ ಸತ್ಯಾಸತ್ಯತೆ ತಿಳಿಯಲು ಸೈಬರ್ ತಂಡದ ಅಧಿಕಾರಿಗಳ ನೆರವು ಪಡೆಯಲಾಗಿದೆ. ಅದರಲ್ಲಿ ಆರೋಪಿ ಪ್ರಜ್ವಲ್ ರೇವಣ್ಣನ ಮುಖ ಚಹರೆ ಪತ್ತೆಯಾಗಿಲ್ಲ. ಆತನ ಧ್ವನಿ ಆಧರಿಸಿ ಆತನೇ ವೀಡಿಯೋದಲ್ಲಿರುವ ವ್ಯಕ್ತಿ ಎಂದು ಖಚಿತಪಡಿಸಿಕೊಳ್ಳಬೇಕಿದೆ. ಹೀಗಾಗಿ ಕೆಲ ತಜ್ಞರನ್ನು ನೇಮಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
Related Articles
ಕಾರ್ಯವೇ ತಲೆನೋವು
ಮೂಲಗಳ ಪ್ರಕಾರ ಸಾವಿರಾರು ವೀಡಿಯೋಗಳು ವೈರಲ್ ಆಗಿವೆ ಎಂದು ಹೇಳಲಾಗಿದೆ. ಈ ವೀಡಿಯೋದಲ್ಲಿರುವ ಎಲ್ಲ ಮಹಿಳೆಯರನ್ನು ಪತ್ತೆ ಹಚ್ಚುವುದು ಕಷ್ಟ. ಈ ಪೈಕಿ ಕೆಲವರನ್ನು ಪತ್ತೆ ಹಚ್ಚಿ ಹೇಳಿಕೆ ನೀಡುವಂತೆ ಪರೋಕ್ಷವಾಗಿ ಮನವಿ ಮಾಡಬಹುದು. ಒಂದು ವೇಳೆ ಅವರು ನಿರಾಕರಿಸಿದರೆ, ಯಾರಿಗೂ ಬಲವಂತ ಮಾಡುವಂತಿಲ್ಲ. ಹೇಳಿಕೆ ನೀಡಿದರೆ, ಸಾಕ್ಷ್ಯಗಳನ್ನಾಗಿ ಪರಿಗಣಿಸಬಹುದು ಎಂದು ಮೂಲಗಳು ತಿಳಿಸಿವೆ.
Advertisement
ವಿದೇಶದಲ್ಲಿರುವ ಪ್ರಜ್ವಲ್ಪ್ರಕರಣದ 2ನೇ ಆರೋಪಿ ಪ್ರಜ್ವಲ್ ರೇವಣ್ಣ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದೇಶಕ್ಕೆ ತೆರಳಿದ್ದಾರೆ. ಸದ್ಯ ಜರ್ಮನಿಯಲ್ಲಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಪ್ರಕರಣದಲ್ಲಿ ಅವರ ಹೇಳಿಕೆ ಪಡೆಯಲೇಬೇಕಿದೆ. ಆದರಿಂದ ಅವರ ಮನೆಯವರ ಮೂಲಕ ಸಂಪರ್ಕಿಸಿ ಮೌಖಿಕ ಮತ್ತು ವಾಟ್ಸ್‌ಆ್ಯಪ್ ಮೂಲಕ ನೋಟಿಸ್ ನೀಡಲಾಗುತ್ತದೆ. ಒಂದು ವೇಳೆ ಅದಕ್ಕೆ ಸರಿಯಾದ ರೀತಿಯಲ್ಲಿ ಸ್ಪಂದಿಸದಿದ್ದರೆ ಕಾನೂನು ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.