ಕೇಂದ್ರ ಸರಕಾರ ನೀಡಿರುವ ರಾಜತಾಂತ್ರಿಕ ಪಾಸ್ ಪೋರ್ಟನ್ನು ರದ್ದುಗೊಳಿಸಿ ಆರೋಪಿ ದೇಶಕ್ಕೆ ಮರಳಲು ಸಹಕಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಬರೆದ ಪತ್ರಕ್ಕೆ ಕೇಂದ್ರ ಯಾವುದೇ ಉತ್ತರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಕೋರ್ಟ್ ಮೂಲಕ ಆರೋಪಿಗೆ ನೀಡಿರುವ ರಾಜತಾಂತ್ರಿಕ ಪಾಸ್‌ಪೋರ್ಟ್ ಮತ್ತು ಸಾಮಾನ್ಯ ಪಾಸ್‌ಪೋರ್ಟ್ ರದ್ದುಗೊಳಿಸಲು ಮುಂದಾಗಿದೆ. ಈಗಾಗಲೇ ಲುಕ್‌ಔಟ್ ನೋಟಿಸ್, ಬ್ಲೂಕಾರ್ನರ್ ನೋಟಿಸ್ ಹೊರಡಿಸಲಾಗಿದೆ. ಈ ಮಧ್ಯೆ ಪ್ರಜ್ವಲ್ 2-3 ಬಾರಿ ವಿಮಾನ ಟಿಕೆಟ್ ರದ್ದುಗೊಳಿಸಿದ್ದಾನೆ. ಹೀಗಾಗಿ ಕೋರ್ಟ್ ಮೂಲಕ ಪ್ರಜ್ವಲ್‌ನ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಲು ಎಸ್‌ಐಟಿ ಚಿಂತನೆ ನಡೆಸಿದೆ. ಈ ಸಂಬಂಧ ಎಸ್‌ಐಟಿ ಸಭೆ ಕೂಡ ನಡೆಸಿದೆ ಎಂದು ತಿಳಿದು ಬಂದಿದೆ.
Advertisement
ದೋಷಾರೋಪಣ ಪಟ್ಟಿ ಸಲ್ಲಿಕೆಗೆ ಸಿದ್ಧತೆಮತ್ತೂಂದೆಡೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಶೀಘ್ರದÇÉೇ ಪ್ರಕರಣದ ತನಿಖೆ ಪೂರ್ಣಗೊಳಿಸಿ ದೋಷಾರೋಪಣ ಪಟ್ಟಿ ಸಲ್ಲಿಸಲು ತಯಾರಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದ್ದು, ಇದುವರೆಗೂ ಆತ ವಿದೇಶದಿಂದ ವಾಪಸ್ ಬಂದಿಲ್ಲ. ಪ್ರಜ್ವಲ್ 2-3 ಬಾರಿ ದಿಢೀರ್ ಆಗಿ ವಿಮಾನದ ಟಿಕೆಟ್ ರದ್ದು ಪಡಿಸಿರುವ ಮಾಹಿತಿ ಇದೆ. ಹೀಗಾಗಿ ತನಿಖೆ ಪೂರ್ಣಗೊಳಿಸಿ, ಸಾûಾ$Âಧಾರ ಸಹಿತ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸುತ್ತೇವೆ. ಈ ಆಧಾರದ ಮೇಲೆ ರೆಡ್‌ಕಾರ್ನರ್ ನೋಟಿಸ್ ಜಾರಿ ಮಾಡಲಾಗುವುದು. ಸಿಬಿಐನ ಇಂಟರ್‌ಪೋಲ್ ಅನುಮತಿ ಕೇಳಲಾಗಿದೆ. ಒಂದು ವೇಳೆ ರಾಜತಾಂತ್ರಿಕ ಹಾಗೂ ಸಾಮಾನ್ಯ ಪಾಸ್‌ಪೋರ್ಟ್ ರದ್ದುಗೊಂಡರೆ ಅವರನ್ನು ಕರೆ ತರುವುದು ಸುಲಭವಾಗಲಿದೆ ಎಂದು ಮೂಲಗಳು ತಿಳಿಸಿವೆ.