Advertisement

SIT ಪ್ರಜ್ವಲ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ: ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

02:00 PM May 12, 2024 | Team Udayavani |

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಅವರನ್ನು ವಾಪಸ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ. ಇಂಟರ್‌ಪೋಲ್ ಅವರ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ.

Advertisement

ಸೂಕ್ಷ್ಮವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹೇಳಿಕೆಗಳನ್ನು ನೀಡುವುದು ಅಥವಾ ಮಾಹಿತಿಯನ್ನು ಹಂಚಿಕೊಳ್ಳುವ ಬಗ್ಗೆ  ರಾಜಕೀಯ ಮುಖಂಡರಿಗೆ ಎಚ್ಚರಿಕೆಯನ್ನೂ  ಗೃಹ ಸಚಿವರು ನೀಡಿದ್ದಾರೆ.

”ಕರೆತರಲು ವಿದೇಶಕ್ಕೆ ತೆರಳುವ ಯಾವುದೇ ಆಯ್ಕೆ ಇಲ್ಲ. ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ಇಂಟರ್ ಪೋಲ್ ಮಾಹಿತಿ ಹಂಚಿಕೊಳ್ಳಲಿದೆ. ಪ್ರಜ್ವಲ್ ಪತ್ತೆಯಾದ ದೇಶದವರು ಇಂಟರ್‌ಪೋಲ್ ಗೆ ತಿಳಿಸುತ್ತಾರೆ, ನಂತರ ನಮ್ಮ ಏಜೆನ್ಸಿಗಳು, ಸಿಬಿಐ ತಿಳಿದು ಅವರ ಮೂಲಕ ನಾವು ತಿಳಿದುಕೊಳ್ಳುತ್ತೇವೆ. ಇಲ್ಲಿಯವರೆಗೆ ಪ್ರಜ್ವಲ್ ಕುರಿತು ಯಾವುದೇ ಮಾಹಿತಿ ಇಲ್ಲ’ ಎಂದು ಪರಮೇಶ್ವರ್ ಹೇಳಿದರು.

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದ ಒಂದು ದಿನದ ನಂತರ ಅಂದರೆ ಏಪ್ರಿಲ್ 27 ರಂದು ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ. ಮೊದಲ ಹಂತದಲ್ಲಿ ಚುನಾವಣೆ ನಡೆದ ಹಾಸನ ಲೋಕಸಭೆ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಜಂಟಿ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದು ಈಗಾಗಲೇ ಜೆಡಿಎಸ್ ಅವರನ್ನು ಪಕ್ಷದಿಂದ ಅಮಾನತು ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next