Advertisement

ಅಖಾಡ ರಂಗೇರಿಸಿದ ಶಿವಸೇ

04:55 PM Apr 15, 2018 | |

ಯಾದಗಿರಿ: ರಾಜ್ಯದಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಶಿವಸೇನೆ ಸ್ಪರ್ಧೆ ಮಾಡುತ್ತಿದ್ದು, 60 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಮೊದಲ ಪಟ್ಟಿಯಲ್ಲಿ 21 ಕ್ಷೇತ್ರದ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಅದರಲ್ಲಿ ಯಾದಗಿರಿ, ಸುರಪುರ ಒಳಗೊಂಡಿದೆ.

Advertisement

ಹುಬ್ಬಳ್ಳಿಯಲ್ಲಿ ಶಿವಸೇನೆ ರಾಜ್ಯಾಧ್ಯಕ್ಷ ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ ಅವರು ಯಾದಗಿರಿ ಮತಕ್ಷೇತ್ರದ ಅಭ್ಯರ್ಥಿಯನ್ನಾಗಿ ವಿಜಯಕುಮಾರ ಪಾಟೀಲ, ಸುರಪುರ ಮತಕ್ಷೇತ್ರದ ಅಭ್ಯರ್ಥಿಯನ್ನಾಗಿ ರಾಜಾಪಿಡ್ಡ ನಾಯಕ ಅವರ ಹೆಸರು ಘೋಷಣೆ ಮಾಡಿದ್ದಾರೆ. ಯಾದಗಿರಿ ಮತಕ್ಷೇತ್ರದಿಂದ ಅಭ್ಯರ್ಥಿಯಾಗಿರುವ ವಿಜಯಕುಮಾರ ಪಾಟೀಲ ಅವರು ಎಬಿವಿಪಿ ಕಾರ್ಯಕರ್ತರಾಗಿ ನಂತರ ಕಳೆದ ಐದು ವರ್ಷಗಳಿಂದ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಿಂದೂ ಪರ ಹೋರಾಟಗಳಲ್ಲಿ ಮಂಚೂಣಿಯಲ್ಲಿದ್ದಾರೆ.

ಸುರಪುರ ಮತಕ್ಷೇತ್ರದ ರಾಜಾ ಪಿಡ್ಡ ನಾಯಕ ಅವರು ಕಳೆದ 25ವರ್ಷಗಳಿಂದ ಆರ್‌ಎಸ್‌ಎಸ್‌ ಕಾರ್ಯಕರ್ತರಾಗಿ ಸೇವೆ
ಸಲ್ಲಿಸುತ್ತಿದ್ದಾರೆ. ಇವರು ಸಹ ಹಿಂದೂ ಪರ ಸಂಘಟನೆ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಅನೇಕ ಸಮಾಜಮುಖೀ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಇವರಿಬ್ಬರ ಸ್ಪರ್ಧೆಯಿಂದ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ ಹಾಗೂ ಪ್ರಾದೇಶಿಕ ಪಕ್ಷ ಜೆಡಿಎಸ್‌ಗೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದು ಕಾಲವೇ ನಿರ್ಧರಿಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next