Advertisement

ಹೌರಾದಲ್ಲಿ ಕಂಟ್ರಿ ಲಿಕ್ಕರ್ ಕುಡಿದು 6 ಮಂದಿ ಸಾವು ; ಹಲವರು ಅಸ್ವಸ್ಥ

02:15 PM Jul 20, 2022 | Team Udayavani |

ಹೌರಾ : ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಗ್ರಾಮವೊಂದರಲ್ಲಿ ದೇಶೀಯ ಮದ್ಯವನ್ನು ಸೇವಿಸಿದ ನಂತರ ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

Advertisement

ಸಾವಿಗೆ ಕಾರಣ ತಿಳಿದುಬಂದಿಲ್ಲವಾದರೂ, ಪೊಲೀಸರು ಮದ್ಯದಂಗಡಿ ಮಾಲೀಕ ಪ್ರತಾಪ್ ಕರ್ಮಾಕರ್ ಅವರನ್ನು ಬಂಧಿಸಿದ್ದಾರೆ.

ಮಾಲಿಪಂಚ್ಘೋರಾ ಪ್ರದೇಶದಲ್ಲಿ ಮಂಗಳವಾರ ರಾತ್ರಿ ದೇಶೀಯ ಮದ್ಯವನ್ನು ಸೇವಿಸಿದ ನಂತರ ಹಲವಾರು ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಅನಾರೋಗ್ಯಕ್ಕೆ ಒಳಗಾದವರಲ್ಲಿ ಹೆಚ್ಚಿನವರು ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಅವರಲ್ಲಿ ಆರು ಮಂದಿ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಲು ನಾವು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ನಾವು ಅಂಗಡಿಯ ಮಾಲೀಕರನ್ನು ಬಂಧಿಸಿ ಅಲ್ಲಿಂದ ಮದ್ಯದ ಮಾದರಿಗಳನ್ನು ರಾಸಾಯನಿಕ ಪರೀಕ್ಷೆಗಾಗಿ ಕಳುಹಿಸಿದ್ದೇವೆ ಎಂದು ಅಧಿಕಾರಿಗಳು ಹೇಳಿದರು.

ಇನ್ನು ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದ್ದು, ಅಧಿಕಾರಿಗಳು ಅಂಗಡಿಗೆ ಸೀಲ್ ಹಾಕಿದ್ದಾರೆ.ಪ್ರದೇಶದಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next