Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರೋ ರಾತ್ರಿ ಮನೆಗಳ ಮೇಲೆ ದಾಳಿ ನಡೆಸಿದ ಪೊಲೀಸರು, ಶೋಧ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಕ್ರಮಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಮತ್ತೂಂದೆಡೆ “ಕನ್ನಡ ಪರ ಸಂಘಟನೆ ಕಾರ್ಯಕರ್ತರು ನಮ್ಮ ಮೇಲೆ ದಬ್ಟಾಳಿಕೆ ನಡೆಸಿದ್ದಾರೆ. ಹೀಗಾಗಿ ಬೆಂಗಳೂರು ಬಂದ್ ಮಾಡಬೇಕು ಎಂಬ’ ಆಡಿಯೋ ವೈರಲ್ ಆಗಿದ್ದು ವಿವಾದದ ಸ್ವರೂಪ ಪಡೆದುಕೊಂಡಿದೆ.
Related Articles
Advertisement
ಕರ್ನಾಟಕ ರಣಧೀರ ಪಡೆ ರಾಜ್ಯಾಧ್ಯಕ್ಷ ಹರೀಶ್‌ಕುಮಾರ್ ಮಾತನಾಡಿ, ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು ಮಾಡುವುದು ಬಿಬಿಎಂಪಿ ಕೆಲಸ. ಆದರೆ ಹಿಂದಿ ಭಾಷೆಯಲ್ಲಿದ್ದ ಕಾರಣಕ್ಕೆ ಕಾರ್ಯಕರ್ತರು ಹರಿದು ಹಾಕಿದ್ದಾರೆ. ಇದು ಮಹಾ ಅಪರಾಧವೇ ಎಂದು ಪ್ರಶ್ನಿಸಿದರು. ಈ ಆರೋಪದ ಕೇಸಿಗೆ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದರು.
ಹಿಂದಿ ಭಾಷಿಕರು ಕನ್ನಡವನ್ನು ಗೌರವಿಸಿಲ್ಲ.ನಾವು ನಿಮ್ಮ ಸೌಹಾರ್ಧಯುತವಾಗಿಯೇ ಇರುತ್ತೇವೆ. ಕನ್ನಡಿಗರು ಹೃದಯ ವೈಶಾಲ್ಯ ಉಳ್ಳವರು ನೀವು ಕನ್ನಡಿಗರ ಕ್ಷಮೆ ಕೇಳಬೇಕು. ಹಿಂದಿ ಭಾಷೆಯಲ್ಲಿ ಬ್ಯಾನರ್ ಹಾಕಿದ ಸಂಬಂಧ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತೇವೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ವಕೀಲರಾದ ಸೂರ್ಯ ಮುಕುಂದರಾಜ್, ಕನ್ನಡ ಪರ ಸಂಘಟನೆಗಳ ಮುಖಂಡ ಬಸರಾಜು, ಗೋವಿಂದರಾಜು, ರೂಪೇಶ್ ರಾಜಣ್ಣ ಸೇರಿದಂತೆ ಹಲವು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಘಟನೆ ಏನು?: ಇನ್‌ಫೆಂಟ್ರಿ ರಸ್ತೆಯಲ್ಲಿ ಕಾರ್ಯಕ್ರಮವೊಂದಕ್ಕೆ ಸಂಬಂಧಿಸಿದಂತೆ ಆ.16ರಂದು ಹಿಂದಿ ಭಾಷೆಯಲ್ಲಿ ಬರೆದಿದ್ದ ಬ್ಯಾನರ್ ಹಾಕಲಾಗಿತ್ತು. ಇದನ್ನು ಪ್ರಶ್ನಿಸಿದ ಕೆಲವು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಬ್ಯಾನರ್ ಹರಿದು ಹಾಕಿದರು ಎಂಬ ಆರೋಪ ಸಂಬಂಧ ರಮೇಶ್‌ಗೌಡ, ಟಿ.ಅಂಜನಪ್ಪ, ಹರೀಶ್ ಕುಮಾರ್, ಬಿ.ಮಂಜುನಾಥ್, ಎಂ.ಚಂದ್ರಶೇಖರ್, ಮಾದೇಶ್ ಗೌಡ ಎಂಬವರನ್ನು ಬಂಧಿಸಿರುವ ಕಮರ್ಷಿಯಲ್ ಸ್ಟೀಟ್ ಪೊಲೀಸರು, ಆರೂ ಮಂದಿ ವಿರುದ್ಧ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.