Advertisement

ರಾಮನಗರದಲ್ಲಿ ಆರು ಬ್ಲ್ಯಾಕ್‌ ಫಂಗಸ್  ಕೇಸ್‌ ಪತ್ತೆ

05:38 PM May 27, 2021 | Team Udayavani |

ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಬ್ಲ್ಯಾಕ್‌ ಫಂಗಸ್‌ನ ಆರು ಪ್ರಕರಣಗಳು ಮಾತ್ರ ಪತ್ತೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎಂ.ಅಶ್ವಥ್‌ ನಾರಾಯಣ ತಿಳಿಸಿದ್ದಾರೆ.

Advertisement

ಬುಧವಾರ ರಾಮನಗರ ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ಆನ್‌ ಲೈನ್‌ ಮೂಲಕ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಬ್ಲ್ಯಾಕ್‌ ಫಂಗಸ್‌ ಬಂದವರಿಗೆ ಐವರಿಗೆ ವಿಕ್ಟೋರಿಯಾಆಸ್ಪತ್ರೆಯಲ್ಲಿ ಮತ್ತು ಇನ್ನೊಬ್ಬರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .

ಬ್ಲ್ಯಾಕ್‌ ಫಂಗಸ್‌ಗೆ ಔಷಧಿ ಕೊರತೆ ಇದೆ.ಇನ್ನೊಂದು ವಾರದಲ್ಲಿ ಈ ಎಲ್ಲ ಕೊರತೆಯನ್ನೂ ನೀಗಿಸಲಾಗುವುದು ಎಂದು ಹೇಳಿದರು. ಜಿಲ್ಲೆಯಲ್ಲಿ ಕೋವಿಡ್‌ ನಿರ್ವಹಣೆ ಉತ್ತಮವಾಗಿದ್ದು, ಪಾಸಿಟಿವಿಟಿ ದರವೂ ಕಡಿಮೆ ಇದ್ದು, ಈಗ1891 ಮಂದಿ ಕೇರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next