Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಒಂದೇ ದಿನ ಆರು ಬಲಿ!

05:56 PM Jul 10, 2020 | keerthan |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ತನ್ನ ಜಾಲವನ್ನು ವಿಸ್ತರಿಸುತ್ತಿದೆ. ಒಂದೆಡೆ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಸಾವಿನ ಸಂಖ್ಯೆಯಲ್ಲಿಯೂ ಏರಿಕೆ ಕಾಣುತ್ತಿದೆ. ಇದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ ಆರು ಮಂದಿ ಸೋಂಕಿತರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಉಳ್ಳಾಲದ 67 ವರ್ಷದ ವೃದ್ಧ, ತೊಕ್ಕೊಟ್ಟುವಿನ 58 ವರ್ಷದ ಮಹಿಳೆ, ಫಳ್ನೀರ್ ಮೂಲದ 65 ವರ್ಷದ ವ್ಯಕ್ತಿ ಮತ್ತು ಹೊಸಬೆಟ್ಟುವಿನ 35 ವರ್ಷ ಪ್ರಾಯದ ಯುವಕ ಇಂದು ಕೋವಿಡ್-19 ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ. ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಇಂದಿನ ಆರು ಕೋವಿಡ್ 19 ಪ್ರಕರಣಗಳ ಕಾರಣದಿಂದ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಒಂದೇ ದಿನ ಆರು ಮಂದಿ ಸೋಂಕಿತರು ಸಾವನ್ನಪ್ಪಿದ್ದು ಜನತೆಯ ಆತಂಕ್ಕೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next