Advertisement

Road Mishap: ಮುಜಾಫರ್‌ನಗರದಲ್ಲಿ ಭೀಕರ ರಸ್ತೆ ಅಪಘಾತ… ಕಾರಿನಲ್ಲಿದ್ದ 6 ಮಂದಿ ಮೃತ್ಯು

09:41 AM Nov 14, 2023 | Team Udayavani |

ಲಕ್ನೋ: ಟ್ರಕ್‌ಗೆ ಕಾರೊಂದು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರದ ರಾಷ್ಟ್ರೀಯ ಹೆದ್ದಾರಿ-58ರಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.

Advertisement

ಕಾರು ದೆಹಲಿಯಿಂದ ಹರಿದ್ವಾರದ ಕಡೆಗೆ ಹೊರಟಿತ್ತು ಎನ್ನಲಾಗಿದ್ದು ಈ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಆರು ಮಂದಿ ಮೃತಪಟ್ಟಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು.

ಮೃತರ ವಿವರ ಇನ್ನಷ್ಟೇ ಲಭ್ಯವಾಗಬೇಕಾಗಿದ್ದು ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಇದನ್ನೂ ಓದಿ: Mahadev Betting App ಪ್ರಕರಣದಲ್ಲಿ ಡಾಬರ್ ಗ್ರೂಪ್ ಅಧ್ಯಕ್ಷ, ನಿರ್ದೇಶಕರ ಹೆಸರು

Advertisement
Advertisement

Udayavani is now on Telegram. Click here to join our channel and stay updated with the latest news.

Next