Advertisement
ಮುಂಡಗಾರು ಲತಾ, ಸುಂದರಿ ಕುಲ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ಕೆ.ವಸಂತ, ಟಿ.ಎನ್.ಜೀಶ್ ಮುಖ್ಯ ವಾಹಿನಿಗೆ ಬರಲು ಒಪ್ಪಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.
Related Articles
Advertisement
ಎಲ್ಲಾ ಮೊಕದ್ದಮೆಗಳನ್ನು ವಿಶೇಷ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಲು ಸಹಕಾರ ನೀಡಲಾಗುವುದು. ಪ್ರವರ್ಗ –ಎ ವರ್ಗಕ್ಕೆ ಸೇರಿದವರಿಗೆ ₹7.50 ಲಕ್ಷ, ಪ್ರವರ್ಗ –ಬಿ ವರ್ಗಕ್ಕೆ ₹4 ಲಕ್ಷ ಆರ್ಥಿಕ ನೆರವನ್ನು ಮೂರು ಹಂತಗಳಲ್ಲಿ ನೀಡಲಾಗುವುದು. ಕೌಶಲ ತರಬೇತಿ ನೀಡಲಾಗುವುದು. ಕೇರಳ, ಕರ್ನಾಟಕ, ತಮಿಳುನಾಡು ಸೇರಿ ಎಲ್ಲಾ ಸರ್ಕಾರಗಳೂ ನಕ್ಸಲರ ಬಗ್ಗೆ ಅನುಕಂಪದಿಂದಲೇ ವರ್ತಿಸುತ್ತವೆ ಎಂಬ ಭರವಸೆಯನ್ನು ಸರ್ಕಾರ ನೀಡಿದೆ.
ಈ ಕುರಿತು ಶಾಂತಿಗಾಗಿ ನಾಗರಿಕ ವೇದಿಕೆಯ ಕೆ.ಎಲ್.ಅಶೋಕ್ ಅವರನ್ನು ಮಾಧ್ಯಮದವರು ಸಂಪರ್ಕಿಸಿದಾಗ, ‘ಮುಖ್ಯವಾಹಿನಿಗೆ ಬರಲು ಬಯಸುತ್ತಿರುವ ನಕ್ಸಲರ ಬೇಡಿಕೆಗಳು ಸರಿಯಾಗಿವೆ. ಸರ್ಕಾರ ಅವುಗಳನ್ನು ಪರಿಗಣಿಸಬೇಕು’ ಎಂದು ಪ್ರತಿಕ್ರಿಯಿಸಿದರು.
ನಕ್ಸಲರ ಬೇಡಿಕೆಗಳೇನು
* ಭೂಮಿ ಇಲ್ಲದ ಕುಟುಂಬಕ್ಕೆ ಐದು ಎಕರೆ ಕೃಷಿ ಭೂಮಿ ನೀಡಬೇಕು, ಶಾಶ್ವತ ಹಕ್ಕುಪತ್ರ ನೀಡಬೇಕು.
* ಎಲ್ಲಾ ಆದಿವಾಸಿ ಕುಟುಂಬಗಳಿಗೆ ಭೂಮಿ ಮತ್ತು ವಸತಿ ನೀಡಬೇಕು.
* ಕೃಷಿ ಯೋಗ್ಯ ಪಾಳುಭೂಮಿಯನ್ನು ಭೂಹೀನರಿಗೆ ಹಂಚಬೇಕು.
* ಆಹಾರದ ಬೆಳೆ, ಮುಖ್ಯವಾಗಿ ಭತ್ತ ಬೆಳೆಯುವ ರೈತರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕು. ಅವರಿಗೆ ಸಂಪೂರ್ಣ ಬೆಂಬಲವಾಗಿ ನಿಲ್ಲಬೇಕು.
* ಕಸ್ತೂರಿ ರಂಗನ್ ವರದಿ ರದ್ದುಗೊಳಿಸಬೇಕು.
* ಹೈಟೆಕ್ ಟೂರಿಸಂ ನಿಲ್ಲಸಿ ಪರಿಸರ ರಕ್ಷಿಸಬೇಕು.
* ಆದಿವಾಸಿಗಳಿಗೆ ಕಾಡಿನ ಮೇಲಿನ ಎಲ್ಲ ರೀತಿಯ ಅಧಿಕಾರ ಇರಬೇಕು
* ಕುದುರೆಮುಖ ರಾಷ್ಟ್ರೀಯ ಉದ್ಯಾನವನ ರದ್ದಾಬೇಕು.
* ನಿರುದ್ಯೋಗಿಗಳಿಗೆ ಅರ್ಹತೆಗೆ ತಕ್ಕಂತೆ ಉದ್ಯೋಗ ಕೊಡಬೇಕು.
* ಸಾಂಸ್ಕೃತಿಕ ಬದಲಾವಣೆಗಳಿಂದ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು.
* ಹವಾಮಾನ ಬದಲಾವಣೆಯಿಂದ ಕೃಷಿ ಬೆಳೆ, ಮನುಷ್ಯನ ಬದುಕು ಮತ್ತು ಪ್ರಕೃತಿಯ ಮೇಲೆ ಬೀರುತ್ತಿರುವ ಪರಿಣಾಮದ ಬಗ್ಗೆ ವೈಜ್ಞಾನಿಕ ಕಾರಣಗಳನ್ನು ಕಂಡುಕೊಳ್ಳಬೇಕು.
* ಮೂರು ರಾಜ್ಯಗಳಲ್ಲಿ (ಕರ್ನಾಟಕ, ತಮಿಳುನಾಡು, ಕೇರಳ) ರೈತರನ್ನು ಒಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು.
* ರೈತರ ಒತ್ತುವರಿ ಭೂಮಿ ತೆರವುಗೊಳಿಸುವುದನ್ನು ತಕ್ಷಣವೇ ನಿಲ್ಲಿಸಬೇಕು.