Advertisement

Andhra Pradesh ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಬಲಿ

03:34 PM Jun 12, 2023 | Team Udayavani |

ಅನಂತಪಲ್ಲಿ: ಪೂರ್ವ ಗೋದಾವರಿ ಜಿಲ್ಲೆಯ ಅನಂತಪಲ್ಲಿ ಗ್ರಾಮದಲ್ಲಿ ಕಾರು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ವರ್ಷದ ಬಾಲಕ ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

Advertisement

ಮಾಹಿತಿಯ ಪ್ರಕಾರ, ಕುಟುಂಬವು ವಿಜಯವಾಡದಿಂದ ಆಂಧ್ರಪ್ರದೇಶದ ರಾಜಮಂಡ್ರಿ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಮತ್ತು ಎರಡು ವರ್ಷದ ಬಾಲಕ ಸೇರಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪೂರ್ವ ಗೋದಾವರಿ ಜಿಲ್ಲೆಯ ನಲ್ಲಜರ್ಲಾ ಮಂಡಲದ ಅನಂತಪಲ್ಲಿಯಲ್ಲಿ ಕಾರು ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next