Advertisement

Road mishap: ಡಿವೈಡರ್‌ಗೆ ಢಿಕ್ಕಿಯಾದ ಕಾರು; 6 ಮಂದಿ ದುರ್ಮರಣ

11:15 AM Jan 01, 2024 | Team Udayavani |

ರಾಂಚಿ: ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ಸೋಮವಾರ (ಜ.1 ರಂದು) ನಡೆದಿದೆ.

Advertisement

ಕಾರಿನಲ್ಲಿ ಒಟ್ಟು 8 ಜನ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದವರು ಆದಿತ್ಯಪುರ ನಿವಾಸಿಗಳೆಂದು ತಿಳಿದು ಬಂದಿದೆ.

ಕಾರು ನಿಯಂತ್ರಣ ತಪ್ಪಿ ಡಿವೈಡರ್ ಢಿಕ್ಕಿಯಾದ ಪರಿಣಾಮ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next